ಮೈಸೂರು: ದಕ್ಷಿಣ ವಲಯ ಐಜಿಪಿ, ಜಿಲ್ಲಾ ವರಿಷ್ಠಾಧಿಕಾರಿ, ಸಹಾಯಕ ವರಿಷ್ಠಾಧಿಕಾರಿ ಹಾಗೂ ಕೆಲ ಸಿಬ್ಬಂದಿಯ ಕೊರೊನಾ ವರದಿ ನೆಗೆಟಿವ್ ಬಂದಿರುವ ಹಿನ್ನೆಲೆ ನಿಟ್ಟುಸಿರು ಬಿಡುವಂತಾಗಿದೆ.
ಎಸ್ಪಿ, ಐಜಿಪಿ ಕೊರೊನಾ ವರದಿ ನೆಗೆಟಿವ್: ನಿಟ್ಟುಸಿರು ಬಿಟ್ಟ ಸಿಬ್ಬಂದಿ - ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ನ್ಯೂಸ್
ಮೈಸೂರು ದಕ್ಷಿಣ ವಲಯ ಐಜಿಪಿ, ಜಿಲ್ಲಾ ವರಿಷ್ಠಾಧಿಕಾರಿ, ಸಹಾಯಕ ವರಿಷ್ಠಾಧಿಕಾರಿ ಹಾಗೂ ಕೆಲ ಸಿಬ್ಬಂದಿಯ ಕೊರೊನಾ ವರದಿ ನೆಗೆಟಿವ್ ಬಂದಿದೆ.
Corona
ತಿ.ನರಸೀಪುರ ಠಾಣೆಯ ಬುಲೆಟ್ ನಾಪತ್ತೆ ಪ್ರಕರಣದ ತನಿಖೆ ವೇಳೆಯಲ್ಲಿ ಭಾಗಿಯಾಗಿದ್ದ ನಂಜನಗೂಡು ಗ್ರಾಮಾಂತರ ಠಾಣೆಯ ಕಾನ್ಸ್‌ಟೇಬಲ್ ಒಬ್ಬರು ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಐಜಿ, ಎಸ್ ಪಿ, ಎಎಸ್ ಪಿ ಸೇರಿದಂತೆ 73 ಮಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿತ್ತು.
ನಂಜನಗೂಡು ಕಾನ್ಸ್‌ಟೇಬಲ್ ಸೇರಿದಂತೆ ಎಲ್ಲರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಎಲ್ಲರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮಾಹಿತಿ ನೀಡಿದ್ದಾರೆ.