ಕರ್ನಾಟಕ

karnataka

ETV Bharat / state

ಅಂಗಾಂಗಗಳನ್ನ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮೈಸೂರಿನ ಯುವಕ.. - Mysuru News

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾದ ಹಿನ್ನಲೆ ಮೈಸೂರಿನ ಯುವಕನೋರ್ವ ತನ್ನ ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ದೇಹದ ಅಂಗಾಂಗಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾನ ಮಾಡಲಾಗಿದ್ದು, ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಅವುಗಳನ್ನ ಸಾಗಿಸಲಾಗಿದೆ.

ಅಂಗಾಂಗ ದಾನ ಮಾಡಿದ ಯುವಕನ ಮನೆ

By

Published : Aug 16, 2019, 8:19 PM IST

ಮೈಸೂರು: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನೋರ್ವನ ಅಂಗಾಂಗಗಳನ್ನ ದಾನ ಮಾಡುವ ಮೂಲಕ ಸಾವಿನಲ್ಲೂ ಜನರ ಬಾಳಿಗೆ ಬೆಳಕಾಗಿದ್ದಾನೆ.

ಜಿಲ್ಲೆಯ ಪಿರಿಯಾಪಟ್ಟಣ ಮೂಲದ ಧರ್ಮ ಎಂಬ ಯುವಕ ಕಳೆದ ಎರಡು ದಿನಗಳ ಹಿಂದೆ ನಗರದ ಕೆ ಆರ್ ನಗರ ಬಳಿಯ ಚುಂಚನಕಟ್ಟೆಗೆ ಸ್ನೇಹಿತನನ್ನು ನೋಡಲು ಬೈಕ್ ನಲ್ಲಿ ಹೊರಟ್ಟಿದ್ದ. ಆಗ ರಸ್ತೆ ಅಪಘಾತವಾಗಿ ತ್ರೀವವಾಗಿ ಗಾಯಗೊಂಡಿದ್ದ. ಬಳಿಕ ಆತನ ಮೆದುಳು ನಿಷ್ಕ್ರಿಯಗೊಂಡ ಹಿನ್ನಲೆ ಅಂಗಾಂಗಗಳನ್ನು ದಾನ ಮಾಡಲು ಪೋಷಕರು ನಿರ್ಧರಿಸಿದ್ದರು.

ಆದ್ದರಿಂದ ಯುವಕನ ಆಂಗಾಂಗಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾನ ಮಾಡಲಾಗಿದ್ದು, ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ, ಮೂತ್ರಪಿಂಡವನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ, ಶ್ವಾಸಕೋಶ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಮತ್ತು ಒಂದು ಮೂತ್ರಪಿಂಡ ಮತ್ತು ಕಾರ್ನಿಯಾವನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ದಾನ ಮಾಡಲಾಗಿದೆ.

ಅಂಗಾಂಗ ದಾನ ಮಾಡಿದ ಯುವಕನ ಮನೆ..

ಶೂನ್ಯ ಸಂಚಾರ (ಝೀರೋ ಟ್ರಾಫಿಕ್) ವ್ಯವಸ್ಥೆಯ ಮೂಲಕ ಅಂಗಾಂಗಗಳನ್ನು ವಿವಿಧ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಮೈಸೂರಿನ ಬಿಜಿಎಸ್ ಆಸ್ಪತ್ರೆಯು ಹೇಳಿದೆ.

ABOUT THE AUTHOR

...view details