ಕರ್ನಾಟಕ

karnataka

ETV Bharat / state

FIR ದಾಖಲಾಗಿದೆ, ಶೀಘ್ರವೇ ಆರೋಪಿಗಳ ಬಂಧನ: ಪೊಲೀಸ್ ಆಯುಕ್ತ ಚಂದ್ರಗುಪ್ತ - ಪೊಲೀಸ್ ಆಯುಕ್ತ ಚಂದ್ರಗುಪ್ತ

ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ಪೊಲೀಸ್ ಆಯುಕ್ತ ಚಂದ್ರಗುಪ್ತ
ಪೊಲೀಸ್ ಆಯುಕ್ತ ಚಂದ್ರಗುಪ್ತ

By

Published : Aug 25, 2021, 7:14 PM IST

ಮೈಸೂರು:ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

ಶೀಘ್ರವೇ ಆರೋಪಿಗಳ ಬಂಧನ: ಪೊಲೀಸ್ ಆಯುಕ್ತ ಚಂದ್ರಗುಪ್ತ

ನಗರದಲ್ಲಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಎಲ್ಲ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದ್ದು, ಲೈಂಗಿಕ ಕಿರುಕುಳ ಆರೋಪದ ಮೇಲೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

ಇದನ್ನೂ ಓದಿ: ಮೈಸೂರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.. ಆರೋಪಿಗಳ ಬಂಧನಕ್ಕೆ ಸಿಎಂ ಸೂಚನೆ

ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಯುವತಿಯ ಜೊತೆಯಿದ್ದ ಯುವಕನಿಂದಲೂ ಮಾಹಿತಿ ಪಡೆದಿದ್ದೇವೆ ಎಂದರು.

ABOUT THE AUTHOR

...view details