ಕರ್ನಾಟಕ

karnataka

ETV Bharat / state

ಜಂಬೂಸವಾರಿ 30-40 ನಿಮಿಷಕ್ಕೆ ಸೀಮಿತ: ಮೈಸೂರು ಪೊಲೀಸ್ ಕಮಿಷನರ್ - City Police Commissioner Dr Chandragupta on Mysuru Dasara

30 ರಿಂದ 40 ನಿಮಿಷಗಳ ಒಳಗೆ ಜಂಬೂಸವಾರಿ ಮೆರವಣಿಗೆ ಮುಗಿಯಲಿದ್ದು, ಸೋಮವಾರ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಇರುತ್ತದೆ. ಸಿಎಂ ಯಡಿಯೂರಪ್ಪ ಬಲರಾಮ ಗೇಟ್​ನ‌ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ ಮೆರವಣಿಗೆ ನಡೆಯಲಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹೇಳಿದರು.

By

Published : Oct 24, 2020, 12:57 PM IST

ಮೈಸೂರು:ಸರಳ ದಸರಾದ ಹಿನ್ನೆಲೆಯಲ್ಲಿ ಈ ಬಾರಿ ಜಂಬೂಸವಾರಿಯ ಮೆರವಣಿಗೆ 30 ರಿಂದ 40 ನಿಮಿಷಗಳ ಒಳಗೆ ಮುಗಿಯಲಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ತಿಳಿಸಿದರು.

ಇಂದು ಮರದ ಅಂಬಾರಿ ತಾಲೀಮಿನಲ್ಲಿ ಭಾಗವಹಿಸಿ ನಂತರ ಜಂಬೂಸವಾರಿಯ ಸಿದ್ಧತೆಯನ್ನು ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ಜಂಬೂಸವಾರಿಯ ತಾಲೀಮು ಮುಗಿಸಿದ್ದು, ಸಿಎಂ ಯಡಿಯೂರಪ್ಪ ಸೋಮವಾರ ಬಲರಾಮ ಗೇಟ್​ನ‌ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ನಂತರ ಮಧ್ಯಾಹ್ನ ಮೆರವಣಿಗೆ ನಡೆಯಲಿದೆ. ಆಹ್ವಾನಿತರಿಗೆ ಮಾತ್ರ ಅರಮನೆ ಒಳಗಡೆ ಪ್ರವೇಶವಿದ್ದು ಸಾರ್ವಜನಿಕರಿಗೆ ಅರಮನೆ ಪ್ರವೇಶ ಇರುವುದಿಲ್ಲ ಎಂದು ಹೇಳಿದರು.

30 ರಿಂದ 40 ನಿಮಿಷಗಳ ಒಳಗೆ ಜಂಬೂಸವಾರಿ ಮೆರವಣಿಗೆ ಮುಗಿಯಲಿದ್ದು, ಜಂಬೂಸವಾರಿ ದಿನ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಇರುತ್ತದೆ. ಜಂಬೂಸವಾರಿಯಲ್ಲಿ ಭಾಗವಹಿಸುವ ಕಲಾವಿದರು ವೀರಗಾಸೆ, ನಾದಸ್ವರ, ಸಾಂಸ್ಕೃತಿಕ ತಂಡ, ಅಶ್ವಪಡೆ, ಪೊಲೀಸ್ ಬ್ಯಾಂಡ್, ಒಂದು ಸ್ತಬ್ಧ ಚಿತ್ರದಲ್ಲಿ ಭಾಗವಹಿಸುವ ಜನರಿಗೆ ಮಾತ್ರ ಅರಮನೆ ಒಳಗೆ ಪ್ರವೇಶ ಇರುತ್ತದೆ. ಉಳಿದ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಕೇವಲ 300 ಜನರಿಗೆ ಮಾತ್ರ ಜಂಬೂಸವಾರಿಯಲ್ಲಿ ಭಾಗವಹಿಸಲು ಅವಕಾಶ ಇದ್ದು, ದೂರದರ್ಶನದಲ್ಲಿ ನೇರ ಪ್ರಸಾರ ಇರಲಿದೆ. ಆದ್ದರಿಂದ ಕೋವಿಡ್ ಸಂದರ್ಭದಲ್ಲಿ ಜನರು ಮನೆಯಿಂದಲೇ ಸರಳ ದಸರಾವನ್ನು ವೀಕ್ಷಣೆ ಮಾಡಬೇಕೆಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details