ಮೈಸೂರು:ಮನೆಯಲ್ಲಿ ಐಸೋಲೇಟ್ ಆಗಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಸೇರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಜಯರಾಂ ಹೇಳಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಮನೆಯಲ್ಲಿ ಐಸೋಲೇಟ್ ಆಗಿರುವ ಕೋವಿಡ್ ಸೋಂಕಿತರು ಹೊರಗಡೆ ಓಡಾಡಿ ಇತರರಿಗೆ ಸೋಂಕು ಹಬ್ಬಿಸುತ್ತಿದ್ದಾರೆ. ಹಾಗಾಗಿ, ಅವರನ್ನು ಮನವೊಲಿಸಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸುವುದು ಸೂಕ್ತ ಎಂದರು.
ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಪರಿಕಲ್ಪನೆ ಚೆನ್ನಾಗಿದೆ. ಕೋವಿಡ್ ಸೋಂಕಿತರಿಗೆ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡಿ, ಗಂಭೀರ ಸ್ಥಿತಿ ಎದುರಾಗದಂತೆ ತಡೆಯಲು ಇದು ಪೂರಕವಾಗಿದೆ. ಗ್ರಾಮೀಣ ಪ್ರದೇಶಗಳ ಬಹುತೇಕ ಮನೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ. ಅಂತಹ ಮನೆಯಲ್ಲಿ ವಾಸಿಸುವ ಸೋಂಕಿತರನ್ನು ಸಮೀಪದ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.