ಮೈಸೂರು :ಲಾರ್ಡ್ ಮೆಕಾಲೆಯ ಶಿಕ್ಷಣ ಪದ್ಧತಿಯಲ್ಲಿ ಕಾಂಗ್ರೆಸ್ ಇಷ್ಟು ವರ್ಷ ಆಡಳಿತ ನಡೆಸಿದೆ. ಆದರೂ ಸ್ವಾಭಿಮಾನಭರಿತವಾದ ದೇಶ ನಿರ್ಮಾಣ ಮಾಡಲು ಅವರಿಗೆ ಆಗಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ವಿದೇಶಿ ಸಂಸ್ಕೃತಿಯಲ್ಲೇ ಬೆಳೆದು ಬಂದಿರುವ ಕಾಂಗ್ರೆಸ್ಗೆ ಸ್ವದೇಶಿ ಚಿಂತನೆ ಇಲ್ಲ. ಹಾಗಾಗಿ, ಕಾಂಗ್ರೆಸ್ ಹೊಸ ಶಿಕ್ಷಣ ನೀತಿಯನ್ನೂ ವಿರೋಧ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್, ನರೇಂದ್ರ ಮೋದಿ ಪ್ರಧಾನಿ ಆದಾಗಿನಿಂದಲೂ ಎಲ್ಲಾ ನೀತಿಯನ್ನು ವಿರೋಧ ಮಾಡುತ್ತಿದೆ. ದೇಶದ ಹಿತದೃಷ್ಟಿಯಿಂದ ಯಾವುದೇ ತೀರ್ಮಾನಕ್ಕೂ ಬೆಂಬಲ ನೀಡಿಲ್ಲ. ಸರ್ಜಿಕಲ್ ಸ್ಟ್ರೈಕ್, ಚೀನಾ ಮೇಲೆ ಆಕ್ರಮಣವನ್ನು ವಿರೋಧ ಮಾಡಿದರು. ಕಾಂಗ್ರೆಸ್ ಇರುವುದೇ ಟೀಕೆ ಮಾಡಲು ಎಂದು ಹೇಳಿದರು.
ಗ್ಯಾಸ್ ಸಿಲಿಂಡರ್ ಬೆಲೆ ವಿಚಾರವಾಗಿ ಮಾತನಾಡಿ, ಎಲ್ಲಾ ಸರ್ಕಾರದ ಅವಧಿಯಲ್ಲೂ ಬೆಲೆ ಏರಿಕೆಯಾಗಿದೆ. ಬಿಜೆಪಿ ಸರ್ಕಾರದಲ್ಲೂ ಬೆಲೆ ಏರಿಕೆಯಾಗಿದೆ. ಮೋದಿ ಸರ್ಕಾರ ಬೆಲೆ ಏರಿಕೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದರು.
ಓದಿ: ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ?