ಮೈಸೂರು:ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಂದು ಕೋವಿಡ್ ಪರೀಕ್ಷೆ ನಡೆಯಲಿಲ್ಲ. ಹೀಗಾಗಿ, ಯಾವುದೇ ಸೋಂಕಿತ ಪ್ರಕರಣಗಳು ವರದಿಯಾಗಿಲ್ಲ.
ವೈದ್ಯನ ಆತ್ಮಹತ್ಯೆ: ಮೈಸೂರಲ್ಲಿ ಕೋವಿಡ್ ಪರೀಕ್ಷೆ ಇಲ್ಲ - Mysore corona cases
ಆರೋಗ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದ ಪರಿಣಾಮ ಇಂದು ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪರೀಕ್ಷೆಗಳು ನಡೆದಿಲ್ಲ.
Mysore
ನಂಜನಗೂಡಿನ ಪ್ರಭಾರಿ ಆರೋಗ್ಯ ಅಧಿಕಾರಿ ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,304 ಇದ್ದು, 7,302 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4,682 ಸಕ್ರಿಯ ಪ್ರಕರಣಗಳಿದ್ದು, 320 ಸಾವು ಸಂಭವಿಸಿದೆ.