ಮೈಸೂರು:ಕೆಲಸ ಮಾಡುತ್ತಿದ್ದ ಮನೆಯಲ್ಲೇ ಹತ್ತು ತಿಂಗಳಿನಿಂದ ಗೌಪ್ಯವಾಗಿ ಚಿನ್ನಾಭರಣ ಕದಿಯುತ್ತಿದ್ದ ಖದೀಮನನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಹೇಮಂತ್ ಕುಮಾರ್ ಬಂಧಿತ ಆರೋಪಿ. ಈತ ತಾಲೂಕಿನ ಯರಗನಹಳ್ಳಿ ಗ್ರಾಮದವನ್ನಾಗಿದ್ದು, ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಶಿವನಾಗು ಎಂಬುವವರ ಮನೆಯಲ್ಲಿ ಮನೆಗೆಲಸ ಮಾಡುತ್ತಲೇ ಕಳೆದ 10 ತಿಂಗಳಿಂದ ಮನೆಯವರಿಗೆ ಗೊತ್ತಾಗದಂತೆ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದನು.