ಕರ್ನಾಟಕ

karnataka

ETV Bharat / state

ಮೈಸೂರು: ರಾಷ್ಟ್ರೀಯ ರಂಗೋತ್ಸವಕ್ಕೆ ರಂಗಾಯಣ ಸಜ್ಜು - rangayana mysuru

ಡಿಸೆಂಬರ್​ 8 ರಿಂದ 15ರ ವರೆಗೆ ನಡೆಯಲಿರುವ ರಾಷ್ಟ್ರೀಯ ರಂಗೋತ್ಸವಕ್ಕೆ ರಂಗಾಯಣದಲ್ಲಿ ಸಕಲ ಸಿದ್ಧತೆ ನಡೆದಿದೆ.

national-rangotsava-in-mysuru-rangayana
ಮೈಸೂರು: ರಾಷ್ಟ್ರೀಯ ರಂಗೋತ್ಸವಕ್ಕೆ ರಂಗಾಯಣ ಸಜ್ಜು

By

Published : Dec 7, 2022, 9:59 PM IST

ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ರಂಗಾಯಣ ಸಜ್ಜಾಗುತ್ತಿದೆ. ನಾಳೆ ಸಂಜೆ 5.30ಕ್ಕೆ ವನರಂಗದಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಭಾರತೀಯತೆ ಜನಪದೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಹಿರಿಯ ಜಾನಪದ ಕಲಾವಿದ ಡಾ.ಪಿ.ಕೆ.ರಾಜಶೇಖರ್​ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ರಂಗಾಯಣದ ನಿರ್ದೇಶಕರಾದ ಅಡ್ಡಂಡ ಸಿ. ಕಾರ್ಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಇಡಗುಂಜಿ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಮತ್ತು ರಂಗಾಯಣದ ಉಪನಿರ್ದೇಶಕ ನಿರ್ಮಲ ಮಠಪತಿ ಉಪಸ್ಥಿತರಿರುತ್ತಾರೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಡಿಸೆಂಬರ್​ 9ರಂದು ಬೆಳಗ್ಗೆ 11 ಗಂಟೆಗೆ ಬಹುರೂಪಿ ಚಲನಚಿತ್ರೋತ್ಸವ ಭಾರತೀಯತೆ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ನಟ ದೊಡ್ಡಣ್ಣ ಚಿತ್ರೋತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಉಪಸ್ಥಿತರಿರುವರು.

ಡಿಸೆಂಬರ್​ 9ರಂದು ಸಂಜೆ 4:30ಕ್ಕೆ ರಂಗಾಯಣದ ಆವರಣದಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕರಕುಶಲ ಮಳಿಗೆ ಹಾಗೂ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಿದ್ದು, ಬಣ್ಣ ಹಾಗೂ ಅರಗು ಕಾರ್ಖಾನೆ ಅಧ್ಯಕ್ಷ ರಘು ಕೌಟಿಲ್ಯ ಕುಶಲ ಮಳಿಗೆಗಳ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಚಿತ್ರಕಲಾ ಪ್ರದರ್ಶನದ ಉದ್ಘಾಟನೆಯನ್ನು ನೆರವೇರಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ. ಶಿವಕುಮಾರ್​ ಭಾಗಿಯಾಗಲಿದ್ದಾರೆ.

ಡಿಸೆಂಬರ್​ 10ರಂದು ಸಂಜೆ 5.30ಕ್ಕೆ ವನರಂಗದಲ್ಲಿ ಬಹುರೂಪಿ ಉತ್ಸವ ಸಮಾರಂಭ ಕಾರ್ಯಕ್ರಮವಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರ ಶಿವಕುಮಾರ್​ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ, ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ಪರೇಶ್​ ರಾವಲ್​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ:ಕರ್ನಾಟಕ ಸೇರಲು ಮತದಾನ ಬಹಿಷ್ಕರಿಸಿದ ಮಹಾರಾಷ್ಟ್ರದ ಗಡಿ ಗ್ರಾಮ

ABOUT THE AUTHOR

...view details