ಕರ್ನಾಟಕ

karnataka

ETV Bharat / state

ಮೈಸೂರಿಗೆ ನೂತನ‌ ಎಸ್‌ಪಿ.. ಅಮಿತ್‌ ಸಿಂಗ್‌ ಅವರಿಂದ ಸಿ ಬಿ ರಿಷ್ಯಂತ್ ಅಧಿಕಾರ ಸ್ವೀಕಾರ.. - Kannada news

ಈ ಹಿಂದೆ ಜಿಲ್ಲಾ ಎಸ್ಪಿಯಾಗಿದ್ದ ಅಮಿತ್ ಸಿಂಗ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ ಹಿನ್ನೆಲೆ, ಅವರ ಸ್ಥಾನಕ್ಕೆ ಸಿ ಬಿ ರಿಷ್ಯಂತ್ ಅಧಿಕಾರ ಸ್ವೀಕರಿಸಿದರು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಬಿ.ರಿಷ್ಯಂತ್

By

Published : Jun 18, 2019, 9:34 PM IST

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ ಬಿ ರಿಷ್ಯಂತ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಜಿಲ್ಲಾ ಎಸ್ಪಿಯಾಗಿದ್ದ ಅಮಿತ್ ಸಿಂಗ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ ಹಿನ್ನೆಲೆ, ಅವರ ಸ್ಥಾನಕ್ಕೆ ಸಿ ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ ಬಿ ರಿಷ್ಯಂತ್

ಜಿಲ್ಲಾ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಅಧಿಕಾರ ಸ್ವೀಕರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಅಪರಾಧ ಸಂಖ್ಯೆ ಇಳಿಕೆ ಮಾಡುತ್ತೇವೆ ಎಂದು ಹೇಳಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೆಲಸ ಮಾಡುವುದೆಂದರೆ ತುಂಬಾ ಖುಷಿ. ಇಲ್ಲಿನ ಜನ ಶಾಂತಿ ಪ್ರಿಯರು, ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡುತ್ತಾರೆ. ಈ ಹಿಂದೆ ಇಲ್ಲಿ ಪೊಲೀಸರು, ಅಧಿಕಾರಿಗಳು ಜನ ಮೆಚ್ಚಿದ ಕೆಲಸ ಮಾಡಿದ್ದಾರೆ. ಅವರ ಸಾಲಿನಲ್ಲಿ ನಡೆದು ಜಿಲ್ಲೆಗೆ ಒಳ್ಳೆಯ ಕೆಲಸ ಮಾಡುತ್ತೇನೆ ಎಂದರು.

ABOUT THE AUTHOR

...view details