ಮೈಸೂರು: ಮುಂದಿನ ಎರಡು ತಿಂಗಳಲ್ಲಿ ನನ್ನ ಕ್ಷೇತ್ರದ ಜನರ ಸಭೆ ಕರೆದು ರಾಜಕೀಯ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆ.ಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಮುಂದಿನ ರಾಜಕೀಯ ತೀರ್ಮಾನವನ್ನು ಇನ್ನು ಎರಡು ತಿಂಗಳುಗಳಲ್ಲಿ ಕೈಗೊಳ್ಳುತ್ತೇನೆ ಎಂದರು.
ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರದ ಮತದಾರರ ಸಭೆ ಕರೆದು ಅವರ ಅಭಿಪ್ರಾಯ ಪಡೆದು ರಾಜಕೀಯ ತೀರ್ಮಾನ ಪ್ರಕಟಿಸುತ್ತೇನೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.