ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಪಿಎಫ್ಐ ಸಂಘಟನೆ ಜಿಲ್ಲಾ ಮಾಜಿ ಅಧ್ಯಕ್ಷ ಮೌಲಾನ ಮಹಮ್ಮದ್ ಕಲಿಮುಲ್ಲಾ ಎಂಬಾತನ ನಿವಾಸದ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.
ಮೈಸೂರಿನ ಶಾಂತಿನಗರದ ಕಲಿಮುಲ್ಲಾ ನಿವಾಸದ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು, ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಮುಂಜಾನೆ 3.30ರ ವೇಳೆಗೆ 8 ಜನ ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.