ಮೈಸೂರು: ಕೊಲೆಯಾದ ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಿನ ಜಾವ ನಿಷೇಧಿತ ಪಿಎಫ್ಐ ಸಂಘಟನೆಯ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೆ ಮೇಲೆ ಎನ್ಐಎ (ರಾಷ್ಟ್ರೀಯ ತನಿಖಾ ತಂಡ) ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಮೈಸೂರು ಸೇರಿ ರಾಜ್ಯದ ಹಲವೆಡೆ ನಿಷೇಧಿತ ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ
ಇಂದು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ತಂಡ ದಾಳಿ ನಡೆಸಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ ನಡೆಸಲಾಗಿದೆ.
ಎನ್ಐಎ ದಾಳಿ
ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಸಂಬಂಧ ರಾಜ್ಯದ ಹಲವು ಕಡೆ ಎನ್ಐಎ ದಾಳಿ ಮಾಡಿದ್ದು, ಮೈಸೂರಿನ ಮಂಡಿ ಮೋಹಲ್ಲಾದಲ್ಲಿರುವ ನಿಷೇಧಿತ ಪಿಎಫ್ಐ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಸುಲೆಮಾನ್ ಎಂಬುವರ ಮನೆ ಮೇಲೆ ಸಹ ದಾಳಿ ಮಾಡಲಾಗಿದೆ. ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದು, ಸುಲೆಮಾನ್ ದೂರವಾಣಿ ಕರೆಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಯ ತಲೆಗೆ 5 ಲಕ್ಷ ಘೋಷಣೆ