ಕರ್ನಾಟಕ

karnataka

ETV Bharat / state

ಯಾವುದೇ ಕಾರಣಕ್ಕೂ ಇನ್ಮುಂದೆ ಜೆಡಿಎಸ್​ ಜೊತೆ ಮೈತ್ರಿ ಇಲ್ಲ: ಸಿದ್ದರಾಮಯ್ಯ - ಕಾಂಗ್ರೆಸ್​,ಜೆಡಿಎಸ್​ ಮೈತ್ರಿ

ಇನ್ಮುಂದೆ ಯಾವುದೇ ಕಾರಣಕ್ಕೂ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

No alliance with JDS: Siddaramaiah
ಜೆಡಿಎಸ್​ ಜೊತೆ ಮೈತ್ರಿ ಇಲ್ಲ ಎಂದ ಸಿದ್ದರಾಮಯ್ಯ

By

Published : Mar 14, 2021, 5:24 PM IST

ಮೈಸೂರು: ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ. ಇನ್ನು ಮುಂದೆ ಜೆಡಿಎಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್​ ಜೊತೆ ಮೈತ್ರಿ ಇಲ್ಲ ಎಂದ ಸಿದ್ದರಾಮಯ್ಯ

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳಿಯವಾಗಿ ಅವರುಗಳು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್​ಗೆ ಯಾವುದೇ ಬೆಂಬಲ ಇಲ್ಲ ಎಂದರು.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರವಾಗಿ ಮಾತನಾಡಿ, ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿ. ಡಿಕೆಶಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರನ್ನು ಸಿಕ್ಕಿಸುತ್ತಿದ್ದಾರೆ ಎಂದು ಡಿಕೆಶಿಯೇ ಹೇಳಿದ್ದಾರೆ. ಅದರ ಬಗ್ಗೆ ನಾನೇನು ಹೇಳಲಿ ಎಂದರು.

ABOUT THE AUTHOR

...view details