ಕರ್ನಾಟಕ

karnataka

ETV Bharat / state

ವೀಕೆಂಡ್​ನಲ್ಲಿ ಸಾರ್ವಜನಿಕರಿಗಿಲ್ಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶ: ಜಿಲ್ಲಾಧಿಕಾರಿ ಆದೇಶ - Chamundi hill in Weekend

ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶನಿವಾರ ಮತ್ತು ಭಾನುವಾರದಂದು ಚಾಮುಂಡಿ ಬೆಟ್ಟಕ್ಕೆ ಭಕ್ತಾಧಿಗಳ ಆಗಮನವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Chamundi hill
ಚಾಮುಂಡಿ ಬೆಟ್ಟ

By

Published : Jul 18, 2020, 8:30 PM IST

ಮೈಸೂರು:ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಶನಿವಾರ ಮತ್ತು ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿಷೇಧ ಮುಂದುವರಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ದಿನನಿತ್ಯ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಶನಿವಾರ ಮತ್ತು ಭಾನುವಾರ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

20-07-2020ರ ಸೋಮವಾರ ಅಮವಾಸ್ಯೆ ಇರುವುದರಿಂದ, ಅಂದು ಸಹ ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರುವ ಹಿನ್ನೆಲೆ, ಸೋಮವಾರವೂ ಸಹ ಭಕ್ತರಿಗೆ ನಿಷೇಧ ವಿಧಿಸಲಾಗಿದೆ.

ಆಷಾಡ ಮಾಸದ 4 ಶುಕ್ರವಾರಗಳಿಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ವಿಧಿಸಿದ್ದ ನಿರ್ಬಂಧ ತೆಗೆಯಲಾಗಿದ್ದು, ಶನಿವಾರ ಮತ್ತು ಭಾನುವಾರ ಮಾತ್ರ ನಿರ್ಬಂಧ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಮುಂದಿನ ಆದೇಶದವರೆಗೆ ವಾರಾಂತ್ಯದ ಈ ಎರಡು ದಿನಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ABOUT THE AUTHOR

...view details