ಮೈಸೂರು: ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 28 ರ ಸಂಜೆ 6 ಗಂಟೆಯಿಂದ ಅಕ್ಟೋಬರ್ 29ರ ಮಧ್ಯಾಹ್ನ 12 ಗಂಟೆಯವರೆಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶ ಹಾಗೂ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿರುತ್ತಾರೆ.
ಪ್ರವೇಶ ನಿಷೇಧವಿರುವ ದಿನಗಳಂದು ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು ಹಾಗೂ ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದುನ್ನು ನಿಷೇಧಿಸಿದೆ.