ಮೈಸೂರು: ಕಾಲುವೆ ದಾಟಿ, ಹೊಂಡ, ಗುಂಡಿ ಹತ್ತಿಳಿದು, ಕೆಸರು ಗದ್ದೆಯಂತಹ ರಸ್ತೆಯಲ್ಲಿ ಶವ ಹೊತ್ತೊಯ್ಯಬೇಕಾದ ದುಸ್ಥಿತಿ ಟಿ.ನರಸೀಪುರ ತಾಲೂಕಿನ ಮಾರನಪುರ ಗ್ರಾಮದಲ್ಲಿ ನಡೆದಿದೆ. ಈ ಸಮಸ್ಯೆಯಿಂದ ಬೇಸತ್ತಿರುವ ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳು ಮತ್ತು ರಾಜಕಾರಣಿಗಳ ವಿರುದ್ಧ ಗರಂ ಆಗಿದ್ದಾರೆ.
ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸುಸಜ್ಜಿತವಾದ ರಸ್ತೆಯ ವ್ಯವಸ್ಥೆ ಇಲ್ಲದಿರುವ ಕಾರಣ ಜನರು ಮೈಲಿಗಟ್ಟಲೆ ಶವವನ್ನು ಹೊತ್ತುಕೊಂಡು ಹಳ್ಳ ಕೊಳ್ಳಗಳನ್ನು ದಾಟಿ ಸ್ಮಶಾನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.