ಮೈಸೂರು: ಫುಟ್ಪಾತ್ನಲ್ಲಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಉಸ್ತುವಾರಿ ಸಚಿವ ವಿ.ಸೋಮಣ್ಣ ನೀಡಿದ ಸೂಚನೆಯನ್ನು ವಿರೋಧಿಸಿ ಚಾಮುಂಡಿ ಬೆಟ್ಟದ ಫುಟ್ಪಾತ್ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ರು.
ಚಾಮುಂಡಿ ಬೆಟ್ಟದಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳ ತೆರವಿಗೆ ಸೂಚನೆ: ವ್ಯಾಪಾರಿಗಳಿಂದ ಪ್ರತಿಭಟನೆ
ಫುಟ್ಪಾತ್ನಲ್ಲಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಉಸ್ತುವಾರಿ ಸಚಿವ ವಿ. ಸೋಮಣ್ಣ ನೀಡಿದ ಸೂಚನೆಯನ್ನು ವಿರೋಧಿಸಿ ಚಾಮುಂಡಿ ಬೆಟ್ಟದ ಫುಟ್ಪಾತ್ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆ ನಡೆಸಿದ್ರು.
ಕಳೆದವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಸ್ಥಳೀಯ ಶಾಸಕರು ಹಾಗೂ ಸಂಸದರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಭಕ್ತರು ಓಡಾಡುವ ಸ್ಥಳವನ್ನು ಆಕ್ರಮಿಸಿಕೊಂಡು ವ್ಯಾಪಾರ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆ ಅವುಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರು.
ಸಚಿವರು ಭೇಟಿ ನೀಡಿದ ದಿನದಂದು ಫುಟ್ಪಾತ್ ಅಂಗಡಿಗಳನ್ನು ದಸರಾ ವೇಳೆಗೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದರು. ಇದನ್ನು ವಿರೋಧಿಸಿ ವ್ಯಾಪಾರಿಗಳು ಇಂದು ಬೀದಿಗಿಳಿದಿದ್ದರು. ಫುಟ್ಪಾತ್ ವ್ಯಾಪಾರದಿಂದಲೇ ನಮ್ಮ ಜೀವನ ನಡೆಯುತ್ತಿದ್ದು, ಸಚಿವರು ನಮ್ಮ ಬದುಕಿನ ಬಗ್ಗೆಯೂ ಯೋಚನೆ ಮಾಡಿ, ವ್ಯಾಪಾರ ನಡೆಸಲು ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದ್ರು.