ಕರ್ನಾಟಕ

karnataka

By

Published : May 22, 2019, 1:02 PM IST

ETV Bharat / state

ದೇವರಾಜ ಮಾರುಕಟ್ಟೆಯ ಪ್ರತಿ ಅಂಗಡಿಗೆ ಸಿಸಿಟಿವಿ ಕಡ್ಡಾಯ: ಕಾರಣ?

ನಗರದಲ್ಲಿರುವ ದೇವರಾಜ ಮಾರುಕಟ್ಟೆಗೆ ಮಹಾನಗರ ಪಾಲಿಕೆ ಅಧಿಕಾರಿಗಳು ನಗರ ಭದ್ರತಾ ತಂಡದ ಪೊಲೀಸ್​ ಮುಖ್ಯಸ್ಥರ ಜೊತೆ ಸೇರಿ ಭೇಟಿ ನೀಡಿ ವರ್ತಕರ ಜೊತೆ ಚರ್ಚೆ ನಡೆಸಿದ್ದು, ಸಿಸಿಟಿವಿ ಕ್ಯಾಮರಾ ಅಳವಡಿಕೆ ಕುರಿತು ಚರ್ಚಿಸಿದ್ದಾರೆ.

devraj market

ಮೈಸೂರು:ಶ್ರೀಲಂಕಾ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆಗೆ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ವ್ಯಾಪಾರಸ್ಥರ ಜೊತೆ ಸಭೆ ನಡೆಸಿದ್ದಾರೆ.

ನಗರದಲ್ಲಿರುವ ದೇವರಾಜ ಮಾರುಕಟ್ಟೆ ಜನನಿಬಿಡ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಸೂಕ್ತ ಭದ್ರತೆ ಇಲ್ಲ ಎಂದು ಗುಪ್ತಚರ ಇಲಾಖೆ ವರದಿ ನೀಡಿತ್ತು. ಅಲ್ಲದೇ ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟದಿಂದ ಎಚ್ಚೆತ್ತುಕೊಂಡಿರುವ ಮಹಾನಗರ ಪಾಲಿಕೆ ಅಧಿಕಾರಿಗಳು, ನಗರ ಭದ್ರತಾ ತಂಡದ ಪೊಲೀಸ್​ ಮುಖ್ಯಸ್ಥರ ಜೊತೆ ಸೇರಿ ಮಾರುಕಟ್ಟೆಗೆ ಭೇಟಿ ನೀಡಿ ವರ್ತಕರ ಜೊತೆ ಚರ್ಚೆ ನಡೆಸಿದ್ದಾರೆ.

ಪ್ರತಿ ಅಂಗಡಿಯ ಮಾಲೀಕರು ಅಂಗಡಿಯ ಒಳಗೆ ಹಾಗೂ ಹೊರಗೆ ಸಿಸಿಟಿವಿ ಅಳವಡಿಸಬೇಕು ಎಂದು ತಿಳಿಸಿದ್ದು, ಈ ಬಗ್ಗೆ ದೇವರಾಜ ಮಾರುಕಟ್ಟೆ ಸಮಿತಿಯ ಪದಾಧಿಕಾರಿಗಳು ಸಭೆ ಸೇರಿ ತಿರ್ಮಾನ ಕೈಗೊಳ್ಳುವ ಬಗ್ಗೆ ಚರ್ಚಿಸಲಿದ್ದಾರೆ.

ಭದ್ರತೆಯೇ ಇಲ್ಲ:
ದೇವರಾಜ ಮಾರುಕಟ್ಟೆಯಲ್ಲಿ ಅಂದಾಜು 2000 ಅಂಗಡಿಗಳಿದ್ದು, ಪ್ರತಿದಿನ ಸಾವಿರಾರು ಜನರು ಇಲ್ಲಿಗೆ ಬರುತ್ತಾರೆ. ಆದರೆ ಇಲ್ಲಿಯ ಭದ್ರತೆಗೆ ಇಬ್ಬರು ಸೆಕ್ಯುರಿಟಿ ಗಾರ್ಡ್​ನೇಮಿಸಲಾಗಿದೆ. ಇಲ್ಲಿ ಯಾವುದೇ ರೀತಿಯಾದ ಸುರಕ್ಷತೆ ಇಲ್ಲ. ಈ ಮಾರುಕಟ್ಟೆಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗುಪ್ತಚರ ಇಲಾಖೆ ಎಚ್ಚರಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಭೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details