ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸಲು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಂಜುಂಡೇಶ್ವರ ಸನ್ನಿಧಿಯಲ್ಲಿ ಭ್ರಷ್ಟಾಚಾರ, ತನಿಖೆ ಆರಂಭಿಸಿದ ಅಧಿಕಾರಿಗಳು
ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ತನಿಖೆ ನಡೆಸಲು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುಜರಾಯಿ ಮಂತ್ರಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಸೂಚನೆ ಹಿನ್ನೆಲೆ ತನಿಖೆ ಆರಂಭವಾಗಿದ್ದು ,ನಂಜುಂಡೇಶ್ವರನ ದೇವಾಲಯಕ್ಕೆ ಉಪವಿಭಾಗಾಧಿಕಾರಿ ಶಿವೇಗೌಡ ನೇತೃತ್ವದಲ್ಲಿ ನಾಲ್ಕು ಜನರ ತಂಡ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.
ನಂಜುಂಡೇಶ್ವರನ ದೇವಾಲಯದಲ್ಲಿ ತುಲಾಭಾರ ಸೇವೆ ಶಾಖೆಯಲ್ಲಿ ನಡೆದಿದ್ದ 17 ಲಕ್ಷಕ್ಕೂ ಅಧಿಕ ಹಣ ದುರ್ಬಳಕೆ ವಿಚಾರವಾಗಿ ತನಿಖೆ ನಡೆಸಲಾಗುತ್ತಿದೆ. ದೇವಾಲಯದಲ್ಲಿ ಕಾರ್ಯನಿರ್ವಹಿಸುವ ತುಲಾಭಾರ ಶಾಖೆ ಸಿಬ್ಬಂದಿಗಳಿಂದ ಹಣ ದುರ್ಬಳಕೆ ಯಾಗಿತ್ತು. ಎನ್.ಪಿ.ಶ್ರೀಕಂಠಸ್ವಾಮಿ,ಗಂಗಾಧರ್ ಹಾಗೂ ಅಭಿಷೇಕ್ ವಿರುದ್ದ ಹಣ ದುರುಪಯೋಗ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ
ನಂಜನಗೂಡು ಪಟ್ಟಣ ಠಾಣೆಯಲ್ಲಿ ಸಿಬ್ಬಂದಿ ವಿರುದ್ದ ಎಫ್ ಐಆರ್ ದಾಖಲಾಗಿತ್ತು. ದೇವಸ್ಥಾನದ ತುಲಾಭಾರ ಶಾಖೆಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.