ಮೈಸೂರು:ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೃದ್ಧೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ನಗರ ತಾಲೂಕಿನ ಹರಂಬಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಪಾರ್ವತಮ್ಮ(85) ಮೃತಪಟ್ಟವರು. ಇವರು ಶನಿವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ತಮ್ಮ ಮನೆಯ ಜಾನುವಾರುಗಳನ್ನು ಸಮೀಪದ ಕೆರೆಗೆ ನೀರು ಕುಡಿಸಲು ತೆರಳಿದ್ದರು. ಈ ವೇಳೆ ಜಾನುವಾರುಗಳನ್ನು ನೀರಿನೊಳಗೆ ಎಳೆದುಕೊಂಡು ಹೋದಾಗ ದುರ್ಘಟನೆ ಸಂಭವಿಸಿದೆ. ಗ್ರಾಮಸ್ಥರೊಬ್ಬರು ಕಾಪಾಡಲು ಮುಂದಾಗಿದ್ದಾರೆ. ಆದರೆ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.