ಮೈಸೂರು:ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾಗೆ ನಾಲ್ಕನೇ ಬಲಿಯಾಗಿದ್ದು, ಈ ಮೂಲಕ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ.
ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿ - ಮೈಸೂರಿನಲ್ಲಿ ಕೊರೊನಾಗೆ ವೃದ್ಧೆ ಸಾವು
ಮಹಾಮಾರಿ ಕೊರೊನಾದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿ
ತಿ.ನರಸೀಪುರ ತಾಲೂಕಿನ ಕೇತುಪುರ ಗ್ರಾಮದ 60 ವರ್ಷದ ಮಹಿಳೆ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ತಡರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಮೃತರ ಅಂತ್ಯಸಂಸ್ಕಾರ ಇಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.