ಮೈಸೂರು:ಹುಣಸೂರು ತಾಲೂಕಿನಲ್ಲಿ ಇಂದು ನಡೆಯಲಿರುವ ಹನುಮ ಜಯಂತಿಯ ಭದ್ರತೆಗಾಗಿ 1,800 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.
ಎಸ್ಪಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ 3 ASP, 10 DySP, 32 ಇನ್ಸ್ಪೆಕ್ಟರ್, 88 SI ಗಳು, 157 ASI, 1100 ಪೊಲೀಸರು, 10 KSRP ಮತ್ತು 6 DAR ತುಕಡಿಗಳು, 2 ತುಕಡಿ ಕ್ಷಿಪ್ರಕಾರ್ಯಪಡೆ, 2 ಆಂಟಿ ಬಾಂಬ್‌ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಅಲ್ಲದೇ, ಮೆರವಣಿಗೆ ವಿಡಿಯೋ ಚಿತ್ರೀಕರಣಕ್ಕೆ ತಂಡ ನಿಯೋಜನೆ ಮಾಡಲಾಗಿದೆ.
ಮೆರವಣಿಗೆಯಲ್ಲಿ ಮೂರು ಬೃಹತ್ ಆಂಜನೇಯಸ್ವಾಮಿ ವಿಗ್ರಹ, ಓಂ, ದತ್ತಾತ್ರೇಯ, ಶ್ರೀ ರಾಮಲಕ್ಷ್ಮಣ ವಿಗ್ರಹ, ಆಂಜನೇಯ ಗದೆ ಸೇರಿದಂತೆ ಒಟ್ಟು 12 ಸ್ಥಬ್ದಚಿತ್ರಗಳು ಈ ಮೆರವಣಿಗೆಯಲ್ಲಿ ಭಾಗಿಯಾಗಲಿವೆ. ಕಲ್ಕುಣಿಕೆ, ಸೇತುವೆ, ಸಂವಿಧಾನ ಸರ್ಕಲ್, ಬಸ್ ನಿಲ್ದಾಣದ ಮುಖ್ಯ ರಸ್ತೆ, ಕಲ್ಪತರು ವೃತ್ತ, ಅಕ್ಷಯ ಭಂಡಾರ್, ಬಜಾರ್ ರಸ್ತೆ, ಜೆ.ಎಲ್.ಬಿ.ರಸ್ತೆ, ಎಸ್.ಜೆ ರಸ್ತೆಗಳ ಮೂಲಕ ಮೆರವಣಿಗೆ ಸಾಗಲಿದೆ. ಈ ಮೆರವಣಿಗೆಯಲ್ಲಿ ಸಾವಿರಾರು ಹನುಮ ಭಕ್ತರು ಭಾಗಿಯಾಗಲಿದ್ದಾರೆ.
ಹನುಮಜಯಂತಿ ಮೆರವಣಿಗೆಗೆ ಕ್ಷಣಗಣನೆ: ಮೈಸೂರು ಜನರು ಮೆರವಣಿಗೆಗೆ ಕಾತರದಿಂದ ಕಾಯುತ್ತಿದ್ದು, ಹುಣಸೂರು ನಗರ ಕೇಸರಿಮಯವಾಗಿದೆ. ಬೃಹತ್ ಆಂಜನೇಯ ಉತ್ಸವ ಮೂರ್ತಿ ಹಾಗೂ ಹನುಮನ ಗದೆ ರೆಡಿಯಾಗಿದ್ದು, ಮುನೇಶ್ವರಕಾವಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿ ಬೆಳಗ್ಗೆ 11ಕ್ಕೆ ರಂಗನಾಥ ಬಡಾವಣೆಯಿಂದ ಮೆರವಣಿಗೆ ಆರಂಭವಾಗಲಿದೆ.