ಮೈಸೂರು: ಜೂನ್ತಿಂಗಳಲ್ಲಿ ಇಡೀ ರಾಜ್ಯಾದ್ಯಂತ ವಿದ್ಯುತ್ ಚಾಲೆಂಜ್ ಸೆಂಟರ್ಗಳ ಅಭಿಯಾನ ಪ್ರಾರಂಭಿಸಿ, ಅದೇ ತಿಂಗಳ 30ರೊಳಗಾಗಿ ಒಂದು ಸಾವಿರ ವಿದ್ಯುತ್ ಚಾರ್ಜಿಂಗ್ ಸೆಂಟರ್ ಆರಂಭ ಮಾಡಲಿದ್ದೇವೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು.
ಇಲ್ಲಿನ ಕಡಕೋಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಅದರ ಚಾರ್ಜಿಂಗ್ ತಂತ್ರಜ್ಞಾನಗಳ ಕುರಿತು ವಿಚಾರ ಸಂಕೀರ್ಣ ಹಾಗೂ ನೂತನವಾಗಿ ನಿರ್ಮಿಸಲಾಗಿರುವ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ವಾಯು ಮಾಲಿನ್ಯ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು ಎಂದರು.
ಎಲೆಕ್ಟಿಕಲ್ ವಾಹನಗಳ ಚಾರ್ಜಿಂಗ್ ಸ್ಟೆಷನ್ ಆರಂಭಿಸಲು ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು. ಕೇಂದ್ರ ಸರ್ಕಾರ ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮೇಲೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಿಡಿಗಳನ್ನು ನೀಡುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹೆಚ್ಚು ಸ್ಟೇಷನ್ ನಿರ್ಮಿಸಲು ಸಭೆಗಳನ್ನು ಮಾಡಿದ್ದೇವೆ ಎಂದರು.