ಬೆಂಗಳೂರು:ತಮ್ಮ ಕುಟುಂಬದ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಿ ಪ್ರೇಮಕುಮಾರಿ ದಾಖಲಿಸಿದ್ದ ಪ್ರಕರಣದಿಂದ ಮಾಜಿ ಸಚಿವ ಎಸ್.ಎ.ರಾಮ್ದಾಸ್ ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮಾಜಿ ಸಚಿವ ರಾಮದಾಸ್ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸಾಕ್ಷಾಧಾರಗಳ ಕೊರತೆಯಿಂದಾಗಿ ಆರೋಪಿಯನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ತಿಳಿಸಿದೆ.
ಪ್ರೇಮಕುಮಾರಿ ಕುಟುಂಬದ ಮೇಲೆ ಹಲ್ಲೆ ಪ್ರಕರಣ: ಮಾಜಿ ಸಚಿವ ರಾಮದಾಸ್ ಖುಲಾಸೆ
ನನ್ನ ಮತ್ತು ಕುಟುಂಬದ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣದಿಂದ ಮಾಜಿ ಸಚಿವ ಎಸ್.ಎ.ರಾಮ್ದಾಸ್ ಅವರನ್ನು ಖುಲಾಸೆಗೊಳಿಸಲಾಗಿದೆ.
Ex minister ramdas safe
ಪ್ರಕರಣದ ಸಂಕ್ಷಿಪ್ತ ಹಿನ್ನೆಲೆ:
ಪ್ರೇಮಕುಮಾರಿ ಅವರು ಮಾಜಿ ಸಚಿವ ರಾಮದಾಸ್ 2015ರ ಜೂನ್ 26ರಂದು ಮನೆಯೊಳಗೆ ಅತಿಕ್ರಮ ಪ್ರವೇಶ ಮಾಡಿ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಮನೆಕೆಲಸದವರ ಮಕ್ಕಳನ್ನು ಎಳೆದೊಯ್ಯಲು ಪ್ರಯತ್ನಿಸಿದ್ದಾರೆಂದು ಆರೋಪಿಸಿ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದರು.