ಮೈಸೂರು: ಪ್ರಗತಿಪರರು ಮಹಿಷಾ ದಸರಾ ಆಚರಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಪುರಭವನದ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಹಿಷ ದಸರಾಗೆ ಸಂಘ ಸಂಸ್ಥೆಗಳಿಂದ ವಿರೋಧ: ಮೈಸೂರಲ್ಲಿ ನಿಷೇಧಾಜ್ಞೆ ಜಾರಿ - ಮಹಿಷಾ ದಸರಾಗೆ ಸಂಘ ಸಂಸ್ಥೆಗಳಿಂದ ವಿರೋಧ
ಪ್ರಗತಿಪರರು ಮಹಿಷ ದಸರಾ ಆಚರಣೆಗೆ ಮುಂದಾಗಿದ್ದಾರೆ. ಇದಕ್ಕೆ ಕೆಲಸ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ಪುರಭವನದ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಂದು ಕೆಲ ಪ್ರಗತಿಪರ ಸಂಘಟನೆಯವರು ಮಹಿಷ ದಸರಾವನ್ನು ಚಾಮುಂಡಿ ಬೆಟ್ಟದ ಮಹಿಷಾಸುರ ವಿಗ್ರಹದ ಎದುರು ಆಚರಿಸಲು ನಿರ್ಧರಿಸಿದ್ದಾರೆ. ಆದರೆ ಈ ಮಹಿಷ ದಸರಾಗೆ ಬಹುತೇಕ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟ ಹಾಗೂ ನಗರದ ಪುರ ಭವನದ ಬಳಿ 500 ಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ12 ಗಂಟೆವರಗೆ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಸಭೆ ಸಮಾರಂಭ ಮೆರವಣಿಗೆ ಹಾಗೂ ಇತರೆ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಪೊಲೀಸರು ಸೂಚಿಸಿದ್ದಾರೆ.
ನಿನ್ನೆ ಸಂಜೆ ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆಯ ಬಳಿ ವೇದಿಕೆ ನಿರ್ಮಿಸಲು ಮುಂದಾಗಿದ್ದ ಪ್ರಗತಿಪರರನ್ನು ಸಂಸದ ಪ್ರತಾಪ್ ಸಿಂಹ ತರಾಟೆಗೆ ತೆಗೆದುಕೊಂಡಿದ್ದರು. ಈ ಮಧ್ಯೆ ಇಂದು ಪ್ರಗತಿಪರರು ಮಹಿಷ ದಸರಾವನ್ನು ಆಶೋಕಪುರಂನಲ್ಲಿ ನಡೆಸಲು ನಿರ್ಧರಿಸಿದ್ದು, ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಗೆ ನಿರ್ಧರಿಸಿದ್ದಾರೆ. ಅಲ್ಲದೆ, ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.