ಕರ್ನಾಟಕ

karnataka

ETV Bharat / state

ಐಟಿ ಬಿಟಿ ಕಂಪನಿಗಳಿಗೆ ಮೂಲ ಸೌಕರ್ಯ ಒದಗಿಸಿ: ವಿಪಕ್ಷ ನಾಯಕ ಸಿದ್ದರಾಮಯ್ಯ

ಐಟಿ, ಬಿಟಿ ಅವರಿಗೆ ಸರಿಯಾದ ಮೂಲಸೌಕರ್ಯ ಬೇಕು. ಈ ಸರ್ಕಾರದವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ

By

Published : Sep 5, 2022, 8:15 PM IST

ಮೈಸೂರು: ಬೆಂಗಳೂರಿನಲ್ಲಿ ಐಟಿ, ಬಿಟಿ ಕಂಪನಿಗಳಿಗೆ ಮೂಲ ಸೌಕರ್ಯ ಒದಗಿಸಿ, ಕಂಪನಿಗಳು ಬೆಂಗಳೂರಿನಲ್ಲಿಯೇ ಉಳಿಯುವಂತೆ ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮೈಸೂರಿನಲ್ಲಿ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ಅವರಿಗೆ ಸರಿಯಾದ ಮೂಲಸೌಕರ್ಯಬೇಕು. ಈ ಸರ್ಕಾರದವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಇದರಿಂದಾಗಿ ಐಟಿ, ಬಿಟಿ ಕಂಪನಿಗಳು ಬೇರೆಡೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಸರ್ಕಾರ ಇತ್ತ ಕಡೆ ಗಮನ ಹರಿಸಿ, ಕಂಪನಿಗಳು ಬೇರೆಡೆ ಹೋಗದಂತೆ ನೋಡಿಕೊಳ್ಳಬೇಕು ಎಂದರು.

ಸರ್ಕಾರವೇ ವೈಫಲ್ಯಗಳಿಗೆ ಕಾರಣ: ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ. ಆದ್ದರಿಂದ ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗುತ್ತಿದೆ. ಅಲ್ಲದೇ, ಸರ್ಕಾರ ಇತ್ತ ಕಡೆ ಗಮನಹರಿಸಬೇಕು. ಆದರೆ, ಸರ್ಕಾರವೇ ವೈಫಲ್ಯಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿರುವುದು

ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ: ಬೆಂಗಳೂರಿನಲ್ಲಿ ಮಳೆಯಿಂದ ಹಾನಿಯಾಗಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬೆಂಗಳೂರಿನ ಕೆರೆ, ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿರುವುದರಿಂದ ಮನೆ, ರಸ್ತೆಗಳಿಗೆ ನೀರು ನುಗ್ಗುತ್ತಿದೆ. ನಮ್ಮ ಸರ್ಕಾರ ಇದ್ದಾಗ, ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ ಕೊಟ್ಟಿದ್ದೆವು. ಬಿಜೆಪಿ ಅವರು ಅಧಿಕಾರಕ್ಕೆ ಬಂದು ಮೂರುವರೆ ವರ್ಷವಾದರೂ ಏನೂ ಮಾಡಲಿಲ್ಲ ಎಂದು ದೂರಿದರು.

ಅವರ ವರದಿಯೇ ಅಂತಿಮ: ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ವಿಚಾರವಾಗಿ ಮಾತನಾಡಿ, ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಂಗ ತೀರ್ಪು ಪುನರ್ ವಿಮರ್ಶೆಗೆ ಮಹಾರಾಷ್ಟ್ರದವರು ಕೇಳಿದ್ದಾರೆ. ನಮ್ಮ ಸರ್ಕಾರದವರೂ ಸಿದ್ಧತೆ ಮಾಡಿಕೊಂಡಿದ್ದಾರೆ. ಮಹಾಜನ್ ಯಾವ ರಾಜ್ಯದವರು ? ಮಹಾರಾಷ್ಟ್ರದವರೇ ಅಲ್ಲವೇ?. ಅವರ ವರದಿಯೇ ಅಂತಿಮ ಎಂದು ಹೇಳಿದರು.

ಮೈತ್ರಿ ವಿಚಾರ ನನಗೆ ಗೊತ್ತಿಲ್ಲ: ಮೈಸೂರು ಮೇಯರ್ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ. ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನುವುದು ಗೊತ್ತಿಲ್ಲ. ಸೋಮವಾರ ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಸಭೆ ಕರೆದಿದ್ದೇನೆ. ಆ ಸಂದರ್ಭದಲ್ಲಿ ಪಾಲಿಕೆ ಮೇಯರ್ ವಿಚಾರವನ್ನು ಅಲ್ಲಿ ಚರ್ಚೆ ಮಾಡ್ತೇನೆ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಅವರು ಏನನ್ನು ಬೇಕಾದ್ರೂ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಓದಿ:ಶಿಕ್ಷಣ ಇಲಾಖೆ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿಎಂಗೆ ಸಿದ್ದರಾಮಯ್ಯ ಒತ್ತಾಯ

ABOUT THE AUTHOR

...view details