ಕರ್ನಾಟಕ

karnataka

ETV Bharat / state

ಕರ್ನಾಟಕದಲ್ಲಿ 4 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ: ನಳಿನ್ ಕುಮಾರ್ ಕಟೀಲ್ - ಅಭಿನಂದನಾ ಕಾರ್ಯಕ್ರಮದಲ್ಲಿ ಕಟೀಲ್​ ಭಾಗಿ

ಕೋವಿಡ್​ ವ್ಯಾಕ್ಸಿನೇಷನ್​ ನೀಡುವಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ಬರೋಬ್ಬರಿ 100 ಕೋಟಿ ವ್ಯಾಕ್ಸಿನ್ ನೀಡುವ ಮೂಲಕ ಹೊಸದೊಂದು ರೆಕಾರ್ಡ್ ನಿರ್ಮಾಣ ಮಾಡಿದೆ. ಇನ್ನು ಕರ್ನಾಟಕದಲ್ಲಿ 4 ಕೋಟಿ ಜನರಿಗೆ ಕೋವಿಡ್​ ವ್ಯಾಕ್ಸಿನ್​ ನೀಡಲಾಗಿದೆ.

Nalin kumar kateel
ನಳಿನ್ ಕುಮಾರ್ ಕಟೀಲ್

By

Published : Oct 21, 2021, 9:35 PM IST

ಮೈಸೂರು:ದೇಶದಲ್ಲಿ ಕರ್ನಾಟಕ ಕೋವಿಡ್ ಲಸಿಕೆ ನೀಡುವಲ್ಲಿ ಉತ್ತಮ ಸಾಧನೆ ತೋರಿದೆ. ಇಲ್ಲಿಯವರೆಗೆ 4 ಕೋಟಿ ಜನರಿಗೆ ವ್ಯಾಕ್ಸಿನ್​​​ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಇಂದು ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್​ ವ್ಯಾಕ್ಸಿನ್ ನೀಡಿರುವ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಯಲ್ಲಿ ಕೆಲಸ ಮಾಡಿದ ಆರೋಗ್ಯ ಕಾರ್ಯಕರ್ತರಿಗೆ, ವೈದ್ಯರಿಗಾಗಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ಭಾಗವಹಿಸಿ ಕಟೀಲ್​ ಮಾತನಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳಿಗೆ ಪ್ರೇರಣೆ ನೀಡಿದರು. ವೈದ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಇದರಿಂದ ಇವತ್ತು ಅಲ್ಪಕಾಲದಲ್ಲೇ 100 ಕೋಟಿ ಜನರಿಗೆ ಲಸಿಕೆ ನೀಡುವ ಕೆಲಸ ಮಾಡಿದ್ದಾರೆ. ಇದು ಪಿಎಂ ಮೋದಿಯವರ ಪ್ರೇರಣೆಯಾಗಿದ್ದು, ಈ ಕೆಲಸಕ್ಕೆ ಸಹಕರಿಸಿದ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು.

ಇಂದು ನಡೆದ 100 ಕೋಟಿ ಲಸಿಕಾ ಅಭಿಯಾನದಲ್ಲಿ 70 ಕೋಟಿ ಜನರಿಗೆ ಮೊದಲ ಡೋಸ್, 30 ಕೋಟಿ ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಅಭಿಯಾನದಲ್ಲಿ ಭಾರತ ಇತಿಹಾಸವನ್ನೇ ಸೃಷ್ಟಿಸಿದೆ.‌ ಆ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಉತ್ತರ ನೀಡಲಾಗಿದೆ ಎಂದು ಕಟೀಲ್ ತಿಳಿಸಿದರು.

ಜಗತ್ತಿನ ಎಲ್ಲ ದೇಶಗಳು ಲಸಿಕೆ ಹುಡುಕುವ ಕೆಲಸ ‌ಮಾಡುತ್ತಿದ್ದರು. ಆದರೆ, ಪ್ರಧಾನಿಗಳು ವೈದ್ಯರಿಗೆ ಮತ್ತು ವಿಜ್ಞಾನಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಆ ಮೂಲಕ ವ್ಯಾಕ್ಸಿನ್​ ಕಂಡು ಹಿಡಿಯಲು ಪ್ರೇರಣೆ ನೀಡಿದರು. ಆದರೆ, ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಪೋಲಿಯೋ ಬಂತು. ಆದರೆ ಅದಕ್ಕೆ ಲಸಿಕೆ ಹುಡುಕು ಕೆಲಸವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: 100 ಕೋಟಿ ಲಸಿಕೆ ನೀಡಿ ಭಾರತ ದಾಖಲೆ..100 ಐತಿಹಾಸಿಕ ಸ್ಮಾರಕಗಳಲ್ಲಿ ತ್ರಿವರ್ಣ ವಿದ್ಯುತ್ ದೀಪಾಲಂಕಾರ

ಕೋವಿಡ್ ನಿರ್ವಹಣೆಯಲ್ಲಿ ಕರ್ನಾಟಕ ಇಲ್ಲಿಯವರೆಗೆ 4 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು. ಉತ್ತಮ‌ ನಿರ್ವಹಣೆ ತೋರಿದೆ. ಇದಕ್ಕೆ ಮಾಜಿ‌ ಮುಖ್ಯಮಂತ್ರಿ ‌ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರಣರಾಗಿದ್ದಾರೆ. ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ABOUT THE AUTHOR

...view details