ಕರ್ನಾಟಕ

karnataka

ETV Bharat / state

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್​ಗೆ ಪದ್ಮಶ್ರೀ ಪ್ರದಾನ - undefined

ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ತಮ್ಮ ಸ್ವಗೃಹದಲ್ಲೇ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

By

Published : Apr 30, 2019, 5:32 AM IST

ಮೈಸೂರು: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂದಿರುವ 2019ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

2019ರ ಮಾರ್ಚ್ 16 ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಯವರು ಎಲ್ಲಾ ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರು. ಅಂದು ಶ್ರೀ ರಾಜೀವ್ ತಾರಾನಾಥ್ ಅವರು ಕಾರಣಾಂತರಗಳಿಂದ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಅಂತೆಯೇ ರಾಜೀವ್ ತಾರಾನಾಥ್ ಅವರ ಸ್ವಗೃಹದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಜಿಲ್ಲಾಧಿಕಾರಿಗಳ ಕಚೇರಿಯ ಶಿಷ್ಟಾಚಾರ ತಹಶೀಲ್ದಾರ್ ಎಸ್.ಎನ್.ನರಗುಂದ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವ ಸಲ್ಲಿಸಿದರು.

For All Latest Updates

TAGGED:

ABOUT THE AUTHOR

...view details