ಕರ್ನಾಟಕ

karnataka

ETV Bharat / state

ಏಪ್ರಿಲ್ ಮೊದಲ ವಾರ ಮೈಸೂರಿಗೆ ಪ್ಯಾರಾ ಮಿಲಿಟರಿ ಪಡೆ: ಎಸ್ಪಿ ಸೀಮಾ ಲಾಟ್ಕರ್ - Etv Bharat Kannada

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಅರೆಸೇನಾ ಪಡೆಯು ಈ ತಿಂಗಳ ಮೊದಲ ವಾರದಲ್ಲಿ ಮೈಸೂರಿಗೆ ಆಗಮಿಸಲಿದೆ.

ಎಸ್ಪಿ ಸೀಮಾ ಲಾಟ್ಕರ್
ಎಸ್ಪಿ ಸೀಮಾ ಲಾಟ್ಕರ್

By

Published : Apr 1, 2023, 8:50 AM IST

Updated : Apr 1, 2023, 9:34 AM IST

ಅರೆಸೇನಾ ಬಗ್ಗೆ ಎಸ್ಪಿ ಸೀಮಾ ಲಾಟ್ಕರ್ ಮಾಹಿತಿ

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳು ಸಹ ಇವೆ. ಇಂತಹ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಜನರಿಗೆ ಅಭಯ ನೀಡಲು, ಪ್ಯಾರಾ ಮಿಲಿಟರಿ ಪಡೆ ಕರೆಸಲಾಗುತ್ತಿದೆ ಎಂದರು.

ಮೈಸೂರು ಜಿಲ್ಲೆಯ ಯಾವ ಏರಿಯಾಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಪಥಸಂಚಲನ ನಡೆಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೇ, ಪಾರದರ್ಶಕ ಚುನಾವಣೆಗೆ ಪೊಲೀಸ್​​ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಇದುವರೆಗೆ 46 ಲಕ್ಷ ನಗದು ವಶ: ಜಿಲ್ಲೆಯ ಚೆಕ್‌ಪೋಸ್ಟ್‌ಗಳಲ್ಲಿ ಇದುವರೆಗೆ ಒಟ್ಟು 46 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಕೆಲವು ಸಮಾಜಘಾತುಕ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು. ಮೈಸೂರು ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಮೈಸೂರು ಜಿಲ್ಲೆಯ 8 ಕಡೆ ಚೆಕ್​ಪೋಸ್ಟ್ ತೆರೆಯಲಾಗಿದೆ. ಬಾವಲಿ ಚೆಕ್​ಪೋಸ್ಟ್ ಮೂಲಕ ಹೊರ ರಾಜ್ಯದಿಂದ ಹೆಚ್ಚಿನ ಜನರು ಆಗಮಿಸುತ್ತಾರೆ. ಅಲ್ಲದೇ, ಕೇರಳ ಗಡಿಯಲ್ಲಿ ನಕ್ಸಲ್ ಚಟುವಟಿಕೆ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.

ಕೇರಳ ಗಡಿಗೆ ಹೊಂದಿಕೊಂಡಂತೆ ಎಂಟು ಬೂತ್​ಗಳು ಬರಲಿದ್ದು ಆ ಭಾಗದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಇತರೆ ಜಿಲ್ಲೆಗಳಾದ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದಲೂ ಮೈಸೂರು ಜಿಲ್ಲೆಗೆ ಹೆಚ್ಚಿನ ಜನರು ಆಗಮಿಸುತ್ತಾರೆ. ಎಲ್ಲಾ ಚೆಕ್​ಪೋಸ್ಟ್​ಗಳಲ್ಲಿ ಅಧಿಕಾರಿಗಳು ನಿಗಾವಹಿಸಿದ್ದಾರೆ ಎಂದರು.

ಇದನ್ನೂ ಓದಿ:ಬೆಳಗಾವಿ: ಎರಡು ಪ್ರತ್ಯೇಕ ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ 72 ಲಕ್ಷ ರೂ. ಪೊಲೀಸರ ವಶಕ್ಕೆ

ದಾಖಲೆಯಿಲ್ಲದೆ ಸಾಗಾಟ ಮಾಡುತ್ತಿದ್ದ 30 ಲಕ್ಷ ಹಣ ಜಪ್ತಿ- ಬೆಂಗಳೂರು: ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 30 ಲಕ್ಷ ರೂ. ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕುಂದನ್ ಗುಜರ್, ರತನ್ ಗುಪ್ತಾ ಎಂಬುವರು ಹಣ ತೆಗೆದುಕೊಂಡು ಹೋಗುತ್ತಿದ್ದರು. ಲಾಲ್​ಭಾಗ್ ದಕ್ಷಿಣ ಗೇಟ್ ಬಳಿ ಅಧಿಕೃತವಾಗಿ ಯಾವುದೇ ದಾಖಲಾತಿಗಳಿಲ್ಲದೆ ಆರೊಪಿಗಳು 30 ಲಕ್ಷ ರೂ. ಸಾಗಿಸುತ್ತಿದ್ದರು. ಗಸ್ತಿನಲ್ಲಿದ್ದ ಪೊಲೀಸರು ತಪಾಸಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 30 ಲಕ್ಷ ರೂ. ವಶಕ್ಕೆ ಪಡೆದ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಐಪಿಎಲ್ ಬೆಟ್ಟಿಂಗ್: ದಂಧೆಕೋರರಿಗೆ ಪೊಲೀಸ್ ಆಯುಕ್ತ ಬಿ.ರಮೇಶ್ ವಾರ್ನಿಂಗ್

ಇದನ್ನೂ ಓದಿ:ನೀತಿ ಸಂಹಿತೆ: ಯಾವುದೇ ರಾಜಕೀಯ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಕೆ ವಿ. ರಾಜೇಂದ್ರ

Last Updated : Apr 1, 2023, 9:34 AM IST

ABOUT THE AUTHOR

...view details