ಮೈಸೂರು:ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಯುವಕ ಶರತ್ (21) ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಆಸ್ಪತ್ರೆಗಳಿಗೆ ಅಲೆದಾಡಿ ಪ್ರಾಣ ಬಿಟ್ಟ ಹೃದ್ರೋಗಿ ಯುವಕ - cardiologist patient died
ಹೃದ್ರೋಗದಿಂದ ಬಳಲುತ್ತಿದ್ದ ಮಂಡ್ಯ ಮೂಲದ ಶರತ್ ಎಂಬಾತನಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಆತ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಈ ವಿಚಾರವಾಗಿ ಮಂಡ್ಯ ಮೂಲದ ಶರತ್ ಎಂಬಾತನ ಕುಟುಂಬಸ್ಥರು ವೈದ್ಯರ ವಿರುದ್ಧ ಕಿಡಿ ಕಾರಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ನರಳುತ್ತಿದ್ದ ಶರತ್ಗೆ ಚಿಕಿತ್ಸೆ ಕೊಡಿಸಲು ಶನಿವಾರ ಮಧ್ಯರಾತ್ರಿಯಿಂದ ಆ್ಯಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗಳಿಗೆ ಪೋಷಕರು ಅಲೆದಾಡಿದ್ದಾರೆ ಎನ್ನಲಾಗಿದೆ.
ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ. ಜಯದೇವ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಆತ ನಿತ್ರಾಣಗೊಂಡಿದ್ದ. ಸಕಾಲದಲ್ಲಿ ಚಿಕಿತ್ಸೆ ದೊರಕಿದ್ದರೆ ಶರತ್ ಬದುಕುಳಿಯುತ್ತಿದ್ದ. ಆದ್ರೆ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.