ಕರ್ನಾಟಕ

karnataka

ETV Bharat / state

ಮೈಸೂರು: ಜಿ.ಪಂ‌ ಸಿಇಒ ವರ್ಗಾವಣೆ ಆದೇಶ ಹಿಂಪಡೆಯುವಂತೆ ಪಿಡಿಒ ಸಂಘ ಒತ್ತಾಯ - ಜಿ.ಪಂ‌ ಸಿಇಒ ವರ್ಗಾವಣೆ ಆದೇಶ ಹಿಂಪಡೆಯುವಂತೆ ಪಿಡಿಒ ಸಂಘ ಒತ್ತಾಯ

ಮೈಸೂರು ಜಿ.ಪಂ ಸಿಇಒ ವರ್ಗಾವಣೆ ಆದೇಶ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘ ಮೈಸೂರು ಘಟಕ ಒತ್ತಾಯಿಸಿದೆ.

PDO's association demanding to withdraw the transfer order
ಜಿ.ಪಂ‌ ಸಿಇಒ ವರ್ಗಾವಣೆ ಆದೇಶ ಹಿಂಪಡೆಯುವಂತೆ ಪಿಡಿಒ ಸಂಘ ಒತ್ತಾಯ

By

Published : Aug 23, 2020, 3:32 PM IST

ಮೈಸೂರು:ಜಿ.ಪಂ‌. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ವರ್ಗಾವಣೆ ಆದೇಶ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘ ಮೈಸೂರು ಘಟಕ ಒತ್ತಾಯಿಸಿದೆ.

ವರ್ಗಾವಣೆ ಆದೇಶ ಹಿಂಪಡೆಯುವಂತೆ ಪಿಡಿಒ ಸಂಘ ಒತ್ತಾಯ

ಜಿಲ್ಲಾ‌ ಸಂಘದ ಅಧ್ಯಕ್ಷ ಎಂ.ಡಿ.ಮಾಯಪ್ಪ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಸ್.ಆರ್. ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಆದರೆ, ಜಿ.ಪಂ‌. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ದಕ್ಷ ಹಾಗೂ ಪ್ರಮಾಣಿಕ ಅಧಿಕಾರಿಯ ತೇಜೋವಧೆ ಮಾಡುತ್ತಿದ್ದಾರೆ. ಅವರ ಆತ್ಮಸ್ಥೈರ್ಯ ಕುಗ್ಗಿಸಿರುವುದು ಬೇಸರ ತಂದಿದೆ. ಪಿ.ಕೆ.ಮಿಶ್ರ ಅವರ ವರ್ಗಾವಣೆ ಆದೇಶ ಹಿಂಪಡೆಯುವಂತೆ ನಾಳೆ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ABOUT THE AUTHOR

...view details