ಮೈಸೂರು: ಪಿರಿಯಾಪಟ್ಟಣ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮೂರು ಜನ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಆಸ್ಪತ್ರೆಯನ್ನು ಮೂರು ದಿನ ಸೀಲ್‌ಡೌನ್ ಮಾಡಲಾಗಿದೆ.
ಮೂವರು ಸಿಬ್ಬಂದಿಗೆ ಕೊರೊನಾ: ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆ ಸೀಲ್‌ಡೌನ್ - Mysure corona update news
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಮೂವರು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂರು ದಿನಗಳ ಕಾಲ ಆಸ್ಪತ್ರೆ ಸೀಲ್‌ಡೌನ್ ಮಾಡಲಾಗಿದೆ.
ಪಿರಿಯಾಪಟ್ಟಣ ತಾಲೂಕು ಆಸ್ಪತ್ರೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ 66 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆಗಾಗಿ ಬಂದಿದ್ದು, ವೈದ್ಯರು ಇವರನ್ನು ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ನಂತರ ವೃದ್ಧೆ ಸಾವನ್ನಪ್ಪಿದ್ದರು. ಆ ಬಳಿಕ ಆಸ್ಪತ್ರೆಯ ಮೂವರು ಸಿಬ್ಬಂದಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.
ಈಗಾಗಲೇ ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೇವಲ ತುರ್ತು ಚಿಕಿತ್ಸೆ, ಐಸೋಲೇಷನ್ ವಿಭಾಗ ಹಾಗೂ ಫೀವರ್ ಕ್ಲಿನಿಕ್ಗಳನ್ನು ಹೊರತು ಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಿರಿಯಾಪಟ್ಟಣ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ.