ಕರ್ನಾಟಕ

karnataka

ETV Bharat / state

ಮೈಸೂರು ಜಿಲ್ಲೆಯಲ್ಲಿ ಏ.5 ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ: ಜಿಲ್ಲಾಧಿಕಾರಿ

ಮೈಸೂರು ಜಿಲ್ಲೆಯಲ್ಲಿ ಇದೇ ಏಪ್ರಿಲ್​ 5 ರಿಂದ ಪ್ಲಾಸ್ಟಿಕ್​ ಸಂಪೂರ್ಣವಾಗಿ ನಿಷೇಧ ಮಾಡಲಾಗ್ತಿದ್ದು, ಅದರ ಬದಲಿಗೆ ಜಿಲ್ಲಾಡಳಿತದಿಂದ ಬಟ್ಟೆ ಬ್ಯಾಗ್​ಗಳನ್ನು ಪ್ರತೀ ಮನೆಮನೆಗೂ ವಿತರಿಸಲು ತೀರ್ಮಾನಿಸಲಾಗಿದೆ.

plastic will ban from april 5th in mysore
ಜಿಲ್ಲಾಧಿಕಾರಿ ಸಭೆ

By

Published : Apr 3, 2021, 2:09 PM IST

ಮೈಸೂರು: ಜಿಲ್ಲೆಯಲ್ಲಿ ಏಪ್ರಿಲ್ 5 ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಅನ್ನು ನಿಷೇಧ ಮಾಡಲಾಗಿದ್ದು, ಇದರ ಬದಲು ಪರಿಸರ ಸ್ನೇಹಿ ಎರಡು ಬಟ್ಟೆ ಬ್ಯಾಗ್‌ಗಳನ್ನು ಪ್ರತಿಯೊಂದು ಮನೆಗೂ ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸಭೆ

ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಏಪ್ರಿಲ್ 5 ರಿಂದ ಕಡ್ದಾಯವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲು ತಿರ್ಮಾನಿಸಿದ್ದು, ಪ್ಲಾಸ್ಟಿಕ್ ಬದಲಿಗೆ 2 , 5 ಕೆಜಿಮತ್ತು10 ಕೆ.ಜಿ‌ ತೂಕದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳನ್ನು ಮೈಸೂರು ಜಿಲ್ಲೆಯ ಸುಮಾರು 7 ಲಕ್ಷ ಮನೆಗಳಿಗೆ 2 ಬಟ್ಟೆ ಬ್ಯಾಗ್​ಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ರು. ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮ ಜೊತೆ ಈ ಬಟ್ಟೆ ಬ್ಯಾಗ್​​ಗಳನ್ನು ಪೂರೈಸಲು ಒಪ್ಪಂದ ಮಾಡಿಕೊಂಡಿದ್ದು, ದೇವಸ್ಥಾನದ ಬಳಿ ಕೆಂಪು ಬಣ್ಣದ 5 ರೂ.ಬೆಲೆ ಬಾಳುವ ಬ್ಯಾಗ್​​​​​ಗಳನ್ನು ಮಾರಾಟ ಮಾಡಲು ಬೀದಿ- ಬದಿ ಅಂಗಡಿಗಳಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ:

ಬೇರೆ ಜಿಲ್ಲೆಗೆ ಹೋಲಿಸಿದರೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಸಾವಿನ ಪ್ರಮಾಣ ಹೆಚ್ಚಾಗಿದ್ದು, ಇದ್ದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಾರಿಗೆ ತರಲೇ ಬೇಕಾಗಿದೆ. ನಿತ್ಯ 6 ಸಾವಿರ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಹೆಚ್ಚು - ಹೆಚ್ಚು ಜನ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕೆಂದು ಹೇಳಿದ್ರು.

ಜನರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಧ್ಯವಾದಷ್ಟು ಗುಂಪು ಸೇರುವ ಸ್ಥಳಗಳಿಂದ ದೂರವಿರಬೇಕು . ಗಡಿಭಾಗಳಲ್ಲಿ ಕೋವಿಡ್ ಪರೀಕ್ಷಾ ವರದಿ ತಂದರೆ ಮಾತ್ರ ಜಿಲ್ಲೆಯ ಒಳಗಡೆ ಬಿಡಲಾಗುವುದು ಎಂದು ಹೇಳಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗ್ರಾಮೀಣ ಭಾಗದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹೆಚ್ಚಿನ ಜನ ಮುಂದೆ ಬರುತ್ತಿದ್ದು, ಈಗ ಜಿಲ್ಲೆಯಲ್ಲಿ ಲಸಿಕೆ ಕೊರತೆ ಇಲ್ಲ ಎಂದು ತಿಳಿಸಿದರು.

ABOUT THE AUTHOR

...view details