ಕರ್ನಾಟಕ

karnataka

ETV Bharat / state

ಮೋದಿ ಆಗಮನಕ್ಕೆ ಕ್ಷಣಗಣನೆ: ಮೈಸೂರಿನಲ್ಲಿ ಹೈ ಅಲರ್ಟ್​ - etv bharat

ಮೈಸೂರು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಜಿಲ್ಲಾಡಳಿತ ಹೈ ಅಲರ್ಟ್​ ಘೋಷಿಸಿದೆ. ಅವರು ಆಗಮಿಸುವ ದಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕಾಗಿ ಭದ್ರತೆಗೆ ನಿಯೋಜನೆ.

By

Published : Apr 9, 2019, 3:51 PM IST

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಅಲರ್ಟ್​ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕಾಗಿ ಭದ್ರತೆಗೆ ನಿಯೋಜನೆ.

ಮೈಸೂರು ಭಾಗದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲು ಇಂದು ಸಂಜೆ 4.40ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮಹಾರಾಜ ಕಾಲೇಜು ಮೈದಾನಕ್ಕೆ ಕಾರಿನ ಮೂಲಕ ಆಗಲಿಸಲಿದ್ದಾರೆ ಎನ್ನಲಾಗುತ್ತಿದ್ದು, ಹೆಜ್ಜೆ ಹೆಜ್ಜೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.1500 ಪೇದೆಗಳು, 25 ಇನ್ಸ್​ಪೆಕ್ಟರ್​, 20 ಎಸಿಪಿಗಳು, 7 ಎಸ್​ಪಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ABOUT THE AUTHOR

...view details