ಮೈಸೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಸ್ತೆ ತಡೆ ನಡೆಸುತ್ತಿದ್ದ ಮಾಜಿ ಶಾಸಕಎಂ.ಕೆ.ಸೋಮಶೇಖರ್ ಹಾಗು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿಕೆಶಿ ಬಂಧನ ಖಂಡಿಸಿ ರಸ್ತೆ ತಡೆ, ಮಾಜಿ ಶಾಸಕರು,ಕಾರ್ಯಕರ್ತರ ಬಂಧನ - mysmlasarrestnews
ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಮೈಸೂರು-ಊಟಿ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸುತ್ತಿದ್ದ ಮಾಜಿ ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಮಾಜಿ ಶಾಸಕರ ಬಂಧನ
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು-ಊಟಿ ಹೆದ್ದಾರಿಯ ಗುಂಡೂರಾವ್ ನಗರದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ,ಇದೊಂದು ರಾಜಕೀಯ ಪ್ರೇರಿತ ಬಂಧನ. ಬಿಜೆಪಿಯವರು ತಮ್ಮ ಆಡಳಿತ ವೈಫಲ್ಯ ಮುಚ್ಚಿ ಹಾಕಲು ಹಾಗೂ ಕಾಂಗ್ರೆಸ್ ಪ್ರಬಲ ನಾಯಕರನ್ನು ಬೆದರಿಸಲು ಈ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.