ಕರ್ನಾಟಕ

karnataka

ಮೈಸೂರಿನಲ್ಲಿ ಪೊಲೀಸರ ಕಾರ್ಯಾಚರಣೆ.. ಮೂವರು ಗಾಂಜಾ ಮಾರಾಟಗಾರರ ಬಂಧನ

ವಿಶ್ವ ಮಾಧಕ ವಸ್ತು ವಿರೋಧಿ ದಿನದ ಅಂಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ಟಿಬೇಟಿಯನ್ನರನ್ನು ಪೊಲೀಸರು ಬಂಧಿಸಿದ್ದಾರೆ.

By

Published : Jun 29, 2019, 7:44 PM IST

Published : Jun 29, 2019, 7:44 PM IST

ಮೂವರ ಬಂಧನ

ಮೈಸೂರು: ವಿಶ್ವ ಮಾಧಕ ವಿರೋಧಿ‌ ದಿನ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ಟಿಬೇಟಿಯನ್ನರನ್ನು ಬೃಲುಕುಪ್ಪೆ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಠಾಣೆಯ ಪೊಲೀಸರು ವಿಶ್ವ ಮಾಧಕ ವಸ್ತು ವಿರೋಧಿ ದಿನದ ಅಂಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ಟಿಬೇಟಿಯನ್ನರನ್ನು ಬಂಧಿಸಿದ್ದಾರೆ. ಬಂಧಿತರಿಂದ 15ಕೆಜಿಯಷ್ಟು ಗಾಂಜಾ ಗಿಡಗಳನ್ನೂ ವಶಪಡಿಸಿಕೊಂಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬಂಧಿತರು ತೆರ್ವಿಂಗ್, ಸೋನಂ ಹಾಗೂ ಮಿಗ್ಮಾ ಎಂದು ತಿಳಿದು ಬಂದಿದೆ. ಇಬ್ಬರು ತಮ್ಮ ಜಮೀನಿನ ಬೆಳೆಯ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಈ ಮೂವರಲ್ಲಿ ಮಿಗ್ಮಾ ಎಂಬಾತ ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತನನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.ಬಂಧಿತ ಆರೋಪಿಗಳನ್ನು ಬೈಲುಕುಪ್ಪೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ABOUT THE AUTHOR

...view details