ಮೈಸೂರು :ತಹಶೀಲ್ದಾರ್ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡನನ್ನು ಬಂಧಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ತಹಶಿಲ್ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿ: ರೈತ ಮುಖಂಡನ ಬಂಧನ - ರೈತ ಮುಖಂಡ ಬಂಧನ
ಅಖಿಲ ಕರ್ನಾಟಕ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್ ಎಂಬುವವರು ನಂಜನಗೂಡು ತಾಲೂಕು ಕಚೇರಿಗೆ ನುಗ್ಗಿ ತಹಶೀಲ್ದಾರ್ ಜೊತೆ ಗಲಾಟೆ ಮಾಡಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರ ವಿರುದ್ಧ ತಹಶೀಲ್ದಾರ್ ದೂರು ದಾಖಲು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೈತ ಮುಖಂಡನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
farmer leader
ಅಖಿಲ ಕರ್ನಾಟಕ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್ ಎಂಬುವವರೇ ಬಂಧಿತ ರೈತ ಮುಖಂಡ. ಇವರು ನಂಜನಗೂಡು ತಾಲೂಕು ಕಚೇರಿಯ ತಹಶೀಲ್ದಾರ್ ಚೆಂಬರ್ಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಹಶೀಲ್ದಾರ್ ಮಹೇಶ್ ಕುಮಾರ್ಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ನಂಜನಗೂಡು ಪಟ್ಟಣ ಠಾಣೆಗೆ ತಹಶೀಲ್ದಾರ್ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ರೈತ ಮುಖಂಡನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ಅ.03ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.