ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಪ್ರತಿಕ್ರಿಯೆ ಮೈಸೂರು :ಮೈಸೂರು ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡಿಂಗ್ ಆಗುವಾಗ ಲೇಸರ್ ಲೈಟ್ನ ಕಿರಣಗಳಿಂದ ತೊಂದರೆ ಆಗುತ್ತಿದೆ ಎಂಬ ಬಗ್ಗೆ ಮೈಸೂರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ನೀಡಿದ ದೂರಿನ ಬಗ್ಗೆ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣಕ್ಕೆ ವಿಮಾನಗಳು ಆಗಮಿಸಿದಾಗ ಲ್ಯಾಂಡಿಂಗ್ ಸಂದರ್ಭದಲ್ಲಿ ಹಾಗೂ ಹಾರಾಟ ಮಾಡುವ ಸಂದರ್ಭದಲ್ಲಿ ಚಾಮುಂಡಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲೇಸರ್ ಕಿರಣಗಳಿಂದ ತೊಂದರೆ ಅಗುತ್ತಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಪೈಲಟ್ಗಳು ನೀಡಿದ ಮಾಹಿತಿಯ ಮೇಲೆ ದೂರು ಸಲ್ಲಿಸಿದ್ದರು.
ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಇದು ಲೋಕಲ್ ಆಗಿ ಸಿಗುವ ಲೇಸರ್ ಲೈಟ್ನಿಂದ ಮಾಡುತ್ತಿರುವ ಕೆಲಸವಾಗಿದ್ದು, ವಿಮಾನ ಹೋಗುವಾಗ ಹಾಗೂ ಲ್ಯಾಂಡಿಂಗ್ ಸಮಯದಲ್ಲಿ ಈ ರೀತಿ ಆಗುತ್ತಿದೆ. ಇದನ್ನು ಯಾರು ಮಾಡುತ್ತಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಆಗಿಲ್ಲ. ಈಗಾಗಲೇ ಸುತ್ತಮುತ್ತಲಿನ ಗ್ರಾಮದ ಜನರಿಗೆ ಈ ಬಗ್ಗೆ ಎಚ್ಚರಿಕೆ ನೀಡಿದ್ದೇವೆ. ಹಾಗೇನಾದರೂ ಮಾಡಿದರೆ ಕೇಸ್ ಹಾಕಿ ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದ್ದೇವೆ. ಆಟವಾಡುವ ಹುಡುಗರು ಯಾರೋ ಈ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದರು.
ವಿಮಾನ ನಿಲ್ದಾಣದ ಸುತ್ತಮುತ್ತಲಿನಲ್ಲಿರುವ ಹಳ್ಳಿ ಪ್ರದೇಶಗಳಲ್ಲಿ ಈ ಘಟನೆ ನಡೆಯುತ್ತಿದ್ದು, ಈ ಬಗ್ಗೆ ಸ್ಥಳೀಯ ಇನ್ಸ್ಪೆಕ್ಟರ್ಗಳಿಗೆ ನಿಗಾ ಇಡುವಂತೆ ತಿಳಿಸಿದ್ದೇವೆ. ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಲಾಗುವುದು. ವಿಮಾನ ಲ್ಯಾಂಡಿಂಗ್ ಆಗುವ ಪ್ರದೇಶ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಗೆ ಬರುತ್ತದೆ. ಆದರೆ, ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಪ್ರದೇಶದಲ್ಲಿ ಇದು ಜರುತ್ತಿಲ್ಲ. ಲ್ಯಾಂಡಿಂಗ್ಗೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆಯುತ್ತಿದೆ. ಮುಂದೆ ಈ ರೀತಿಯ ಘಟನೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಮೈಸೂರು ಏರ್ಪೋರ್ಟ್ನಲ್ಲಿ ಪೈಲಟ್ಗಳತ್ತ ಲೇಸರ್ ಲೈಟ್ ಬಿಡುವ ಕಿಡಿಗೇಡಿಗಳು: ದೂರು ದಾಖಲು