ಮೈಸೂರು:ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಳೆ ರೌಡಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ ಅವರಿಂದ ದೇವರಾಜ, ಮಂಡಿ, ಲಷ್ಕರ್, ಲಕ್ಷ್ಮಿಪುರಂ ಉದಯಗಿರಿ, ನರಸಿಂಹರಾಜ, ನಜರ್ ಬಾದ್, ವಿವಿಪುರಂ, ವಿಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳಿಗೆ ಕಟು ಎಚ್ಚರಿಕೆ ನೀಡಿದ್ದಾರೆ.