ಮೈಸೂರು: ನೇಣುಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಜರ್ಬಾದ್ ಠಾಣಾ ವ್ಯಾಪ್ತಿಯ ಜಲಪುರಿ ಪೊಲೀಸ್ ವಸತಿಗೃಹದಲ್ಲಿ ನಡೆದಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಸಪ್ಪ ಕೊನ್ನೂರು (27) ಆತ್ಮಹತ್ಯೆ ಮಾಡಿಕೊಂಡವರು.
ಮೈಸೂರಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ - Mysore Police suicide
ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ನಲ್ಲಿ ನಡೆದಿದೆ. ಪರಸಪ್ಪ ಕೊನ್ನೂರು ನೇಣಿಗೆ ಶರಣಾದ ಕಾನ್ಸ್ಟೇಬಲ್.
ಮೈಸೂರು
2016ನೇ ಬ್ಯಾಚ್ನಲ್ಲಿ ಆಯ್ಕೆಯಾಗಿದ್ದ ಪರಸಪ್ಪ, ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ನಜರ್ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಮಚ್ಚು ಬೀಸಿದ ಮೂವರಿಗೆ 7 ವರ್ಷ ಜೈಲುಶಿಕ್ಷೆ: ರೌಡಿಗಳಿಗೆ ಎಚ್ಚರಿಕೆಯ ಗಂಟೆ