ಮೈಸೂರು:ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಗರದಲ್ಲಿ ಖಾಕಿ ಪಡೆ ಕಾರ್ಯಪ್ರವೃತವಾಗಿದೆ. ದಸರಾ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಪೊಲೀಸ್, ರಾತ್ರಿ 8 ಗಂಟೆ ನಂತರ ಅನಗತ್ಯವಾಗಿ ಓಡಾಡುವವರಿಗೆ ಬಿಸಿ ಮುಟ್ಟಿಸಲು ಖಾಕಿ ಪಡೆ ಸಜ್ಜಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿದೆ.
ಈ ಸಂಬಂಧ ನಗರದಲ್ಲಿ ಡಿಸಿಪಿ ಗೀತಾ ಪ್ರಸನ್ನ ಅವರು ಕಾರ್ಯಾಚರಣೆ ನಡೆಸಿದ್ದು, ಎನ್ಆರ್ ವಿಭಾಗದ ಪೊಲೀಸ್ ಸಿಬ್ಬಂದಿಗೆ ಮಾರ್ಗದರ್ಶನ ನೀಡಿದರು. ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಗಮನ ಹರಿಸುವುದು, ರೌಡಿಗಳು ಹಾಗೂ ಪುಂಡರಿಗೆ ವಾರ್ನಿಂಗ್ ನೀಡುವುದು ಸೇರಿದಂತೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ.