ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಉತ್ತರ ಪತ್ರಿಕೆ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಮಂಡಿ ಠಾಣೆ ಇನ್ಸ್ಪೆಕ್ಟರ್ ಜಾಮೀನು ಅರ್ಜಿಯನ್ನ ನ್ಯಾಯಾಲಯ ವಜಾಗೊಳಿಸಿದೆ.
ಮೈಸೂರು ವಿವಿ ಉತ್ತರ ಪತ್ರಿಕೆ ಹಗರಣ: ಇನ್ಸ್ಸ್ಪೆಕ್ಟರ್ ಜಾಮೀನು ಅರ್ಜಿ ವಜಾ - Police inspector bail appeal dismiss
ಮೈಸೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದಾಗ ಪ್ರಕರಣ ದಾಖಲಿಸದೇ ಹಾಗೆ ಬಿಟ್ಟುಕಳುಹಿಸಿದ್ದ ಆರೋಪ ಹೊತ್ತಿದ್ದ ಮಂಡಿ ಠಾಣೆಯ ಇನ್ಸ್ಸ್ಪೆಕ್ಟರ್ ನಾರಾಯಣಸ್ವಾಮಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ನಾರಾಯಣಸ್ವಾಮಿ
ಮಂಡಿ ಠಾಣೆಯ ಇನ್ಸ್ಸ್ಪೆಕ್ಟರ್ ಹುದ್ದೆಯಿಂದ ಅಮಾನತುಗೊಂಡಿರುವ ನಾರಾಯಣಸ್ವಾಮಿ ಜಾಮೀನು ಅರ್ಜಿಯನ್ನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದಾಗ ಪ್ರಕರಣ ದಾಖಲಿಸದೇ ಹಾಗೇ ಬಿಟ್ಟುಕಳುಹಿಸಿದ್ದ ಆರೋಪವನ್ನು ನಾರಾಯಣಸ್ವಾಮಿ ಹೊತ್ತಿದ್ದಾರೆ. ಅಲ್ಲದೇ ಮಂಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.