ಮೈಸೂರು: ನಗರದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ನಿನ್ನೆ ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ 175 ಜನರ 17 ತಂಡಗಳ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಕಾರಾಗೃಹದಲ್ಲಿ ಬಂಧಿಯಾಗಿರುವ ರೌಡಿಗಳು ಹಾಗೂ ಇತರೆ ಸಮಾಜಘಾತುಕ ಶಕ್ತಿಗಳು ಇರುವ ಕೊಠಡಿಗಳಲ್ಲಿ ಪರಿಶೀಲನೆ ನಡೆಸಿದರು.
ಅವರ ಬಳಿ ಮಾದಕ ವಸ್ತುಗಳು, ಮೊಬೈಲ್, ಹಣ ಸೇರಿದಂತೆ ಇತರ ವಸ್ತುಗಳು ಇರುವ ಬಗ್ಗೆ ಪರಿಶೀಲನೆ ನಡೆಸಲಾಯಿತು. ದಾಳಿ ವೇಳೆ ಚುನಾವಣೆ ಸಂಬಂಧ ಯಾವುದೇ ರೀತಿಯ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗದಂತೆ ಜೈಲಿನಲ್ಲಿರುವ ರೌಡಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ರಾಮನಗರ ಜಿಲ್ಲಾ ಕಾರಾಗೃಹದ ಮೇಲೂ ದಾಳಿ
ರಾಮನಗರ ಜಿಲ್ಲಾ ಕಾರಾಗೃಹದ ಮೇಲೂ ಪೊಲೀಸರ ದಾಳಿ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಎಸ್ಪಿ, ಡಿಎಸ್ಪಿ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಚುನಾವಣೆ ಹಿನ್ನೆಲೆ ಈ ದಾಳಿ ಮಹತ್ವ ಪಡೆದುಕೊಂಡಿದೆ. ಜಿಲ್ಲೆಯ ಸುಮಾರು 40 ಜನ ಪೊಲೀಸರು ದಾಳಿ ನಡೆಸಿದ್ದು, ನಿಖರ ಕಾರಣ ತಿಳಿದಿಲ್ಲ.