ಮೈಸೂರು: ಬ್ಯಾಂಕಿಂಗ್ ಪರೀಕ್ಷೆಗಳನ್ನು ಸ್ಥಳೀಯ ಭಾಷೆಯಲ್ಲೇ ಬರೆಯಲು ಅವಕಾಶ ಮಾಡಿ ಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕನ್ನಡದಲ್ಲೇ ಬ್ಯಾಂಕಿಂಗ್ ಪರೀಕ್ಷೆಗೆ ಅವಕಾಶ ಕಲ್ಪಿಸಿ: ಕೇಂದ್ರ ಸಚಿವರಿಗೆ ಪ್ರತಾಪ್ ಸಿಂಹ ಮನವಿ - undefined
ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ಮಾಡಿಕೊಡುವಂತೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಪರೀಕ್ಷೆಗಳಾದ ಐ.ಬಿ.ಪಿ.ಎಸ್ ಮತ್ತು ಆರ್.ಆರ್.ಬಿ ಗೆ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವರಿಗೆ ಇದೇ ವೇಳೆ ಮನವೊರಿಕೆ ಮಾಡಿಸಿದರು. ಕರ್ನಾಟಕದ ವಿದ್ಯಾರ್ಥಿಗಳ ಪರವಾಗಿ 2014ರಲ್ಲಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಮರು ಜಾರಿಗೊಳಿಸಿ ಸ್ಥಳೀಯ ಭಾಷೆಯಲ್ಲೇ ಪರೀಕ್ಷೆ ಬರೆಯುವಂತೆ ಕಡ್ಡಾಯಗೊಳಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.