ಕರ್ನಾಟಕ

karnataka

ETV Bharat / state

ಬಸ್ ನಿಲ್ದಾಣದ ಮೇಲಿನ ಗುಂಬಜ್‌ ತೆರವು‌ ಶತಸಿದ್ಧ: ಪ್ರತಾಪಸಿಂಹ

ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು? ಎಂದು ಸಂಸದ ಪ್ರತಾಪ್​ ಸಿಂಹ ಪ್ರಶ್ನಿಸಿದರು.

pratap-simha-reaction-about-bus-stand-issue
ಸಂಸದ ಪ್ರತಾಪ್​ ಸಿಂಹ

By

Published : Nov 15, 2022, 11:03 PM IST

ಮೈಸೂರು:ಬಸ್ ಶೆಲ್ಟರ್ ಮೇಲಿನ ಗುಂಬಜ್‌ ತೆರವು‌ ಶತಸಿದ್ಧ. ಗುಂಬಜ್ ತೆರವಿಗೆ ನಾನು ನೀಡಿದ ಎರಡು ದಿನದ ಗಡುವು ಮುಗಿದಿದೆ. ಇನ್ನು ಎರಡು ದಿನ ಬಾಕಿ ಇದೆ. ಎರಡು ದಿನದಲ್ಲಿ ತೆರವು ಮಾಡದೆ ಇದ್ದರೆ ನಾನು ಹೇಳಿದಂತೆ ನಾನೇ ತೆರವು ಮಾಡುತ್ತೇನೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದರು.

ಬಸ್ ನಿಲ್ದಾಣದ ಶೆಲ್ಟರ್ ತೆರವು ಮಾಡವುದಿಲ್ಲ ಮೇಲಿನ ಗುಂಬಜ್ ಮಾತ್ರ ತೆರವು ಮಾಡುತ್ತೇನೆ. ನಾನು ಹೇಳಿಕೆ ಕೊಡುವ ಮುನ್ನ ಬರೀ ಗುಂಬಜ್ ಇತ್ತು. ನಂತರ ರಾತ್ರೋರಾತ್ರಿ ಅದರ ಮೇಲೆ ಕಳಸ ಹೇಗೆ ಬಂತು? ಎಂದು ಪ್ರಶ್ನಿಸಿದರು.

ಬಸ್ ನಿಲ್ದಾಣದ ಮೇಲಿನ ಗುಂಬಜ್‌ ತೆರವು‌ ಶತಸಿದ್ಧ

ಮೈಸೂರು ಅರಮನೆ ಮೇಲಿನ ಗೋಪುರಕ್ಕೂ ಮಸೀದಿ ಮೇಲಿನ ಗುಂಬಜ್​ಗೂ ವ್ಯತ್ಯಾಸ ಇಲ್ವ? ಅರಮನೆ ಗೋಪುರಕ್ಕೂ ಗುಂಬಜ್ ಗೂ ಹೋಲಿಕೆ ಮಾಡುವ ಮುನ್ನ ವಾಸ್ತುಶಿಲ್ಪ ಓದಿ ಕೊಳ್ಳಿ. ಅರಮನೆ ಗೋಪುರ ಇಂಡೋ- ಸಾರ್ಸೆನಿಕ್ ವಾಸ್ತುಶಿಲ್ಪದ್ದು. ಬಸ್ ಸ್ಟ್ಯಾಂಡ್ ಮೇಲೆ ಇವರು ಯಾವ ವಾಸ್ತುಶಿಲ್ಪ ಸೃಷ್ಟಿಸುತ್ತಾರೆ ಹೇಳಿ? ಎಂದು ಕಿಡಿಕಾರಿದರು.

ಬಸ್ ಸ್ಟ್ಯಾಂಡ್ ಕಟ್ಟಿದ ಗುತ್ತಿಗೆದಾರ ತನ್ನ ಮನೆ ಮೇಲೆ ಬೇಕಾದರೆ ಗುಂಬಜ್, ಮಿನಾರ್ ಕಟ್ಟಿಕೊಳ್ಳಲಿ. ಶಾಸಕ ರಾಮದಾಸ್ ಅವರು ಅರಮನೆ ಮಾದರಿಯಲ್ಲಿ 20 ಬಸ್ ಸ್ಟ್ಯಾಂಡ್ ಕಟ್ಟಲಿ. ನಾನು ಗುಂಬಜ್ ಬಗ್ಗೆ ಧ್ವನಿ ಎತ್ತಿದ್ದಕ್ಕೆ ರಾಮದಾಸ್ ಅವರು ಮೌನವಹಿಸಿದ್ದಾರೆ. ಅದರ ಅರ್ಥ ನನ್ನ ಮಾತಿಗೆ ಅವರ ಸಮ್ಮತಿ ಇದೆ ಅಂತ. ಅವರು ಹಿಂದುತ್ವದ ಹಿನ್ನೆಲೆಯಲ್ಲಿ ಬಂದವರು. ಬಹುಶಃ ಗುತ್ತಿಗೆದಾರ ಅವರ ದಾರಿ ತಪ್ಪಿಸಿದರೆ ಗೊತ್ತಿಲ್ಲ ಎಂದು ಗುಡುಗಿದರು.

ಇದನ್ನೂ ಓದಿ :ಗುಂಬಜ್​ ಮೇಲೆ ಕಳಶ ಇಟ್ಟರೆ ಅದಕ್ಕೆ ಯಾವ ಅರ್ಥನೂ ಇಲ್ಲ : ಪ್ರತಾಪ್​ ಸಿಂಹ

ABOUT THE AUTHOR

...view details