ಮೈಸೂರು:ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಿದ್ಧತೆಗಳು ಸಂಪೂರ್ಣವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ ಈಟಿವಿ ಭಾರತ್ಗೆ ತಿಳಿಸಿದ್ದಾರೆ.
ದಸರಾ ಉದ್ಘಾಟನೆಗೆ ಸಕಲ ಸಿದ್ಧತೆ: ಸಂಸದ ಪ್ರತಾಪ್ ಸಿಂಹ - mysore dasara news
ನಾಳೆ ಬೆಳಿಗ್ಗೆ 9:39ಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು, ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 9:39ಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು, ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಅಂತಿಮ ಹಂತದಲ್ಲಿದೆ.
ಸ್ವಚ್ಛ ವಾತಾವರಣದಲ್ಲಿ ನಾಳೆ ದಸರಾ ಉದ್ಘಾಟನೆ ಆಗಲಿದ್ದು, ಈ ಬಾರಿ ಯುವ ದಸರಾವನ್ನು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಘಾಟಿಸಲಿದ್ದಾರೆ. ಜೊತೆಗೆ ರಾನು ಮಂಡಲ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದೆ ದಸರಾವನ್ನು ನೋಡಲು ಬರುತ್ತಿದ್ದೆ. ಈ ಬಾರಿ ನಾನೇ ಕೆಲಸ ಕಾರ್ಯಗಳನ್ನು ನೋಡಿ ಮಾಡುತ್ತಿರುವುದು ಖುಷಿ ತಂದಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.