ಕರ್ನಾಟಕ

karnataka

ETV Bharat / state

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಬೈಕ್; ಗರ್ಭಿಣಿ ಪತ್ನಿ ಸಾವು, ಪತಿ ಸ್ಥಿತಿ ಗಂಭೀರ - Etv Bharat Kannada

ದಂಪತಿ ಚಲಿಸುತ್ತಿದ್ದ ಬೈಕ್​ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದ್ದು, ಘಟನೆಯಲ್ಲಿ ಪತ್ನಿ ಮೃತ ಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

KN_M
ಯಮುನಾ ಮತ್ತು ದಕ್ಷಿಣಾಮೂರ್ತಿ

By

Published : Oct 13, 2022, 7:46 PM IST

ಮೈಸೂರು:ದಂಪತಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಹಿಂಬದಿಯಲ್ಲಿ ಕುಳಿತ್ತಿದ್ದ ಗರ್ಭಿಣಿ ಪತ್ನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಯಮುನಾ(22)ಮೃತಪಟ್ಟಿದ್ದು, ದಕ್ಷಿಣಾಮೂರ್ತಿ ಅಲಿಯಾಸ್ ನವೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ದೇವನೂರು ಗ್ರಾಮದ ದಕ್ಷಿಣಾಮೂರ್ತಿ ತನ್ನ ಹೆಂಡತಿ ಯಮುನಾ ಜೊತೆ ಬೈಕ್​ನಲ್ಲಿ ನಂಜನಗೂಡು ಮಾರ್ಗವಾಗಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ತೆರಳುವ ವೇಳೆ, ಬೈಕ್​ ನಿಯಂತ್ರಣ ತಪ್ಪಿ ಕೂಗಲೂರು ಕೆರೆಗೆ ಬಿದ್ದಿದ್ದು, ಹಿಂಬದಿ ಸವಾರಿ ಯಮುನಾ ಸಾವನ್ನಪ್ಪಿದ್ದಾರೆ ಎಂದು ಮೂಲಗಳ ತಿಳಿಸಿವೆ.

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶಿವನಂಜಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತ ದೇಹ ಹೊರ ತೆಗೆದಿದ್ದಾರೆ. ಮೃತ ಯಮುನಾ ಮೂರು ತಿಂಗಳ ಗರ್ಭಿಣಿಯಾಗಿದ್ದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪತಿ ದಕ್ಷಿಣಾಮೂರ್ತಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಮೃತ ಗರ್ಭಿಣಿ ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾರು ಪಲ್ಟಿ: ಯರಗಟ್ಟಿ ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರ ಸಾವು

ABOUT THE AUTHOR

...view details