ಕರ್ನಾಟಕ

karnataka

ETV Bharat / state

ದಸರಾ ಪೂರ್ವಭಾವಿ ಸಭೆ: ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವಂತೆ ಎಸ್.ಟಿ.ಸೋಮಶೇಖರ್ ಸೂಚನೆ

ದಸರಾ ಹಿನ್ನೆಲೆ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಅಧಿಕಾರಿಗಳ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಯಿತು. ಗಜಪಡೆ ಸ್ವಾಗತ ಕಾರ್ಯಕ್ರಮವನ್ನು ಸಾಂಪ್ರದಾಯದಂತೆ ಅರಮನೆ‌ ಆವರಣದಲ್ಲಿ ಆಯೋಜಿಸಲು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ರು.

Preliminary Dasara Meeting held In Mysore
ದಸರಾ ಪೂರ್ವಭಾವಿ ಸಭೆ

By

Published : Sep 19, 2020, 11:45 PM IST

ಮೈಸೂರು:ದಸರಾ ಹಿನ್ನೆಲೆ ಮೈಸೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ , ಈ ಬಾರಿ ಸರಳ ದಸರಾ ಆಚರಿಸುತ್ತಿರುವುದರಿಂದ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬೇಕೆಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ದಸರಾ ಪೂರ್ವಭಾವಿ ಸಭೆ

ಕೋವಿಡ್ ಹಿನ್ನೆಲೆ ಉನ್ನತಾಧಿಕಾರ ಸಮಿತಿಯಲ್ಲಿ ತೀರ್ಮಾನಿಸಿದಂತೆ ಸಾಂಪ್ರದಾಯಕ್ಕೆ ಧಕ್ಕೆಯಾಗದಂತೆ ಸರಳವಾಗಿ ದಸರಾ ಆಚರಿಸಬೇಕು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ದಸರಾ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ ಅವರು, ಗಜಪಡೆ ಸ್ವಾಗತ ಕಾರ್ಯಕ್ರಮವನ್ನು ಸಾಂಪ್ರದಾಯದಂತೆ ಅರಮನೆ‌ ಆವರಣದಲ್ಲಿ ಆಯೋಜಿಸಲು ತಿಳಿಸಿದರು.

ಜಿಲ್ಲಾಧಿಕಾರಿ ಬಿ. ಶರತ್ ಮಾತನಾಡಿ, 5 ಉಪ ಸಮಿತಿಗಳನ್ನು ರಚನೆ ಮಾಡಲಾಗಿದೆ. ಸ್ವಾಗತ ಮತ್ತು ಆಮಂತ್ರಣ ಸಮಿತಿ, ಮೆರವಣಿಗೆ ಸಮಿತಿ, ಸಾಂಸ್ಕೃತಿಕ ಸಮಿತಿ, ದೀಪಾಲಂಕಾರ ಸಮಿತಿ, ಹಾಗೂ ಸ್ವಚ್ಛತೆ ಮತ್ತು ವ್ಯವಸ್ಥೆ ಸಮಿತಿಗಳು ಕಾರ್ಯನಿರ್ವಹಿಸಲಿವೆ ಎಂದರು. ಹಿಂದಿನ ವರ್ಷಗಳಂತೆ ಚೆಸ್ಕಾಂ ವತಿಯಿಂದ ದೀಪಾಲಂಕಾರ ಮಾಡಲಾಗುವುದು ಎಂದರು. ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹಾಗೂ ಜಂಬೂ ಸವಾರಿಗೆ ಎಷ್ಟು ಜನರು ಸೇರಿಸಲು ಅನುಮತಿ ಸಿಗುವುದೋ ನೋಡಿಕೊಂಡು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗುವುದು‌ ಎಂದರು.

ಶಾಸಕರಾದ ಜಿ.ಟಿ‌.ದೇವೇಗೌಡ, ಎಸ್‌.ಎ‌.ರಾಮದಾಸ್, ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ABOUT THE AUTHOR

...view details