ಮೈಸೂರು:ರಾಷ್ಟ್ರಪತಿಗಳು ಅರಮನೆಯ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸುವ ಹಿನ್ನಲೆಯಲ್ಲಿ ಮಧ್ಯಾಹ್ನ 2 ಗಂಟೆ ನಂತರ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ಅರಮನೆಯ ಪ್ರವೇಶವನ್ನು ನಿಷೇಧಿಸಲಾಗಿದೆ.
ರಾಷ್ಟ್ರಪತಿ ಭೇಟಿ ಹಿನ್ನೆಲೆ: ಮಧ್ಯಾಹ್ನ 2ರ ನಂತರ ಸಾರ್ವಜನಿಕರಿಗಿಲ್ಲ ಅರಮನೆ ಪ್ರವೇಶ - ಮೈಸೂರು ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿ
ಇಂದಿನಿಂದ ಎರಡು ದಿನಗಳ ಮೈಸೂರು ಪ್ರವಾಸದಲ್ಲಿರುವ ಭಾರತದ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ಇಂದು ಅರಮನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭಾರತದ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರ 2 ದಿನಗಳ ಮೈಸೂರು ಪ್ರವಾಸ ಇಂದಿನಿಂದ ಆರಂಭವಾಗಲಿದ್ದು, ಇಂದು ಸಂಜೆ ಮೈಸೂರಿನ ಮಂಟಗಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಸಂಜೆ ಅರಮನೆಯಲ್ಲಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಶತಮಾನೋತ್ಸವ ಪ್ರಯುಕ್ತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಬೆಳಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಹಾಗೂ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಅವರು ನಂತರ 11 ಗಂಟೆಗೆ ಜೆಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೆಎಸ್ಎಸ್ ಶಂಕುಸ್ಥಾಪನ ಕಾರ್ಯಕ್ರಮ ನಾಳೆ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಮಾತ್ರ ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ದೇವಾಲಯದ ದರ್ಶನ ಹಾಗೂ ಅರಮನೆ ಕಾರ್ಯಕ್ರಮಗಳಿಗೆ ದೂರದರ್ಶನ ಹಾಗೂ ಆಕಾಶವಾಣಿ ಹೊರತು ಪಡಿಸಿ ಉಳಿದ ಮಾಧ್ಯಮದವರಿಗೆ ಪ್ರವೇಶ ನೀಡಿಲ್ಲ.